ಸಿಸಿಬಿ ಪೊಲೀಸರ ವಶಕ್ಕೆ ಸ್ನೇಹಮಯಿ ಕೃಷ್ಣ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧ ಆರೋಪಗಳನ್ನು ಮಾಡಿದ್ದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಶಾಂತಿನಗರ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಬಡ್ತಿ ಪಡೆಯಲು ಸಿ.ಎಸ್ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ 1.60 ಕೋಟಿ ರೂ. ಹಣ ನೀಡಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದು ಸುಳ್ಳು ಆರೋಪವೆಂದು ಸ್ನೇಹಮಯಿ ಕೃಷ್ಣ ವಿರುದ್ಧವೂ ದೂರು ದಾಖಲಿಸಲಾಗಿತ್ತು. ಇದೇ ವಿಚಾರವಾಗಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...