ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

Date:

ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿದೆ. ವಿಶೇಷ ನ್ಯಾಯಾಲಯದ ತೀರ್ಪನ್ನು ಮರುಪರಿಶಿಲನೆ ನಡೆಸುವಂತೆ ಮೇಲ್ಮನವಿ ಸಲ್ಲಿಸಿದೆ.

2012ರ ಅಕ್ಟೋಬರ್ 10ರಂದು ಉಜಿರೆಯಲ್ಲಿ ಕಾಲೇಜು ಮುಗಿಸಿಕೊಂಡು ಧರ್ಮಸ್ಥಳದಲ್ಲಿ ತನ್ನ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಸಂತೋಷ್ ರಾವ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು. ತನಿಖೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. 11 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಸಂತೋಷ್ ರಾವ್ ನಿರಪರಾಧಿ ಎಂದು ಘೋಷಿಸಿ, ಬಿಡುಗಡೆ ಮಾಡಿತ್ತು.

ಆ ಬಳಿಕ, ನಿಜವಾದ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು. ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಧಿ ಮುಗಿದ ಮೇಲೆ ಮೇಲ್ಮನವಿ ಸಲ್ಲಿಸಿರುವ ಸಿಬಿಐ
2023ರ ಜುಲೈ 16ರಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯವು, ತನ್ನ ತೀರ್ಪಿನ ವಿರುದ್ಧ 60 ದಿನಗಳ ಒಳಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ, ತೀರ್ಪು ಬಂದು ಈಗಾಗಲೇ 120 ದಿನಗಳು ಕಳೆದು ಹೋಗಿವೆ. ಈಗ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಸಂತೋಷ್ ರಾವ್ ಅವರೇ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದಿಸಿದೆ.

ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಸೌಜನ್ಯ ಪರ ಹೋರಾಟಗಳು ಭುಗಿಲೆದ್ದಿವೆ. ಸಂತೋಷ್ ರಾವ್ ನಿರಪರಾಧಿ ಎಂಬುದು ಮೊದಲೇ ಖಾತ್ರಿಯಾಗಿತ್ತು. ಆದರೆ, ನಿಜವಾದ ಅಪರಾಧಿಗಳು ಧರ್ಮಸ್ಥಳದಲ್ಲಿಯೇ ಇದ್ದಾರೆ, ಅವರನ್ನು ಬಂಧಿಸಬೇಕು ಎಂದು ಒತ್ತಾಯಗಳು ಕೇಳಿಬಂದಿವೆ. ಸೌಜನ್ಯ ಕುಟುಂಬಸ್ಥರೂ ಕೂಡ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರ ಸೋದರ ಸಂಬಂಧ ಸೇರಿದಂತೆ ನಾಲ್ವರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಆ ನಾಲ್ವರನ್ನೂ ಬಂಧಿಸಿ, ವಿಚಾರಣೆ ಒಳಪಡಿಸಬೇಕು ಎಂದು ಹೇಳುತ್ತಿದ್ದಾರೆ. ಆದರೆ, ಇದುವರೆಗೂ ಅವರನ್ನು ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂದು ಸೌಜನ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ನಡುವೆ, ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚನೆ ನೀಡಬೇಕೆಂದು ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...