ಎಸ್‌ಎಸ್‌ಎಲ್‌ಸಿ | ಮೇ ಮೊದಲ ವಾರದೊಳಗೆ ಫಲಿತಾಂಶ ಪ್ರಕಟ ಸಾಧ್ಯತೆ

Date:

ಏಪ್ರಿಲ್ 10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಕಾಯುತ್ತಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಡಳಿಯ ಅಧ್ಯಕ್ಷೆ ಮಂಜುಳಾ, “ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕಾರ್ಯ ಏಪ್ರಿಲ್‌ 15 ರಿಂದ ಆರಂಭವಾಗಲಿದೆ. ಸುಮಾರು 20 ದಿನಗಳಲ್ಲಿ ಈ ಮೌಲ್ಯಮಾಪನ ಮುಗಿಯಲಿದೆ. ಆದಷ್ಟು ಬೇಗ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಾಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನಿರೀಕ್ಷಿಸಬಹುದು” ಎಂದು ಹೇಳಿದ್ದಾರೆ.

ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಒಟ್ಟು 3 ಪರೀಕ್ಷೆಗಳನ್ನು ಈ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡೆಸಲಾಗುತ್ತಿದೆ. ಅದರಂತೆ ಈಗಾಗಲೇ ಪರೀಕ್ಷೆ 1 ಏಪ್ರಿಲ್ 6ರಂದು ಅಂತ್ಯಗೊಂಡಿದೆ.

ಕೆಎಸ್‌ಇಎಬಿ ಈ ಬಾರಿ 3 ಪರೀಕ್ಷೆಗಳನ್ನು (ಪೂರಕ ಪರೀಕ್ಷೆ ಅಲ್ಲದ) ನಡೆಸುವ ಹಿನ್ನೆಲೆ, ಬಹುಬೇಗ ಪರೀಕ್ಷೆ 1 ಫಲಿತಾಂಶ ಪ್ರಕಟಿಸಬೇಕಾದ ಅನಿವಾರ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ, ಮಂಡಲಿಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 15 ರಿಂದಲೇ ನಡೆಸಲು ಕ್ರಮಕೈಗೊಂಡಿದೆ.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಶೇ. 78 ರಷ್ಟು ಫಲಿತಾಂಶ ಗಳಿಸಿದ ಬಿಬಿಎಂಪಿ ಕಾಲೇಜುಗಳು

ಇನ್ನು ಮೌಲ್ಯಮಾಪನ ಕಾರ್ಯ ನಡೆಸಲಾಗುವ ಕೇಂದ್ರಗಳ ಶಾಲಾ ಕಟ್ಟಡದ 200 ಮೀಟರ್ ಪ್ರದೇಶವನ್ನು ನಿಷೇಧಿತವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಅದನ್ನು ಪಾಲಿಸಲು ಸೂಚನೆಯನ್ನು ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಬರೆದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾದ ನಂತರ https://kseab.karnataka.gov.in, karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ರಿಜಿಸ್ಟರ್ ನಂಬರ್ ಬಳಸಿ ಚೆಕ್‌ ಮಾಡಿಕೊಳ್ಳಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...