ರೇವಾ ಕಾಲೇಜು ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

Date:

  • ರೇವಾ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
  • ಕಾಲೇಜಿನ ಭದ್ರತಾ ಲೋಪವೂ ಎದ್ದು ಕಾಣುತ್ತಿದೆ: ಡಿಸಿಪಿ

ರೇವಾ ಕಾಲೇಜು ವಾರ್ಷಿಕೋತ್ಸವ ವೇಳೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಗುದ್ದಾಟ ನಡೆದು ಚಾಕುವಿನಿಂದ ಇರಿದುಕೊಂಡಿರುವ ಘಟನೆ ಬೆಂಗಳೂರಿನ ಬಾಗಲೂರು ಬಳಿ ಏ.29ರಂದು ನಡೆದಿದೆ.

ಮೃತ ಯುವಕ ಭಾಸ್ಕರ್ ಜೆಟ್ಟಿ (25) ಕಾಲೇಜಿನ ಮೆಕ್ಯಾನಿಕಲ್‌ ಎಂಜಿನಿಯರಿಂಗ್ 4ನೇ ವರ್ಷದ ವಿದ್ಯಾರ್ಥಿ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ‌ ಮಾಡಲಾಗಿದೆ ಎನ್ನಲಾಗಿದೆ.

ಭಾಸ್ಕರ್ ಅವರನ್ನು ಶುಕ್ರವಾರ ರಾತ್ರಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪದಡಿ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಈಶಾನ್ಯ ‌ವಿಭಾಗದ ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ರಾತ್ರಿ ರೇವಾ ಕಾಲೇಜಿನ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ 9.30 ಗಂಟೆ ಸುಮಾರಿಗೆ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಇದೇ ವೇಳೆ ವಿದ್ಯಾರ್ಥಿಯೊಬ್ಬ ತನ್ನ ಬಳಿಯ ಚಾಕುವಿನಿಂದ ಇರಿದು ಭಾಸ್ಕರ್ ಅವರನ್ನು ಕೊಂದಿದ್ದಾನೆ. ಕಾಲೇಜಿನ ಭದ್ರತಾ ಲೋಪವೂ ಎದ್ದು ಕಾಣುತ್ತಿದೆ” ಎಂದು ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್  ತಿಳಿಸಿದರು.

“ಸದ್ಯ ಕಾಲೇಜು ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ತಪಿತಸ್ಥ ಇನ್ನೂ ಪತ್ತೆಯಾಗಿಲ್ಲ. ಮೃತ ಭಾಸ್ಕರ್ ಅವರ ಪೋಷಕರು ಮತ್ತಿಕೆರೆಯಲ್ಲಿ ಮನೆ ಮಾಡಿದ್ದಾರೆ. ಗುಜರಾತ್‌ ಮೂಲದವರು. ಇಬ್ಬರಿಗೂ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಶನಿವಾರ ಪರೀಕ್ಷೆ ನಡೆಸಲಾಗುವುದು”ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...