ಬೆಂಗಳೂರು | ಮತ್ತೆ ಬುಲ್ಡೋಜರ್; ಒತ್ತುವರಿ ತೆರವು ಕಾರ್ಯ ಶೀಘ್ರ ಆರಂಭ

Date:

  • ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು
  • ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಗುರುತು ಮಾಡಲಾಗಿದೆ. ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿಗಳನ್ನು ಶೀಘ್ರದಲ್ಲಿಯೇ ತೆರವು ಮಾಡಲಾಗುವುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಗುರುವಾರ ಸಭೆ ನಡೆಯಿತು. ಈ ವೇಳೆ, ಮಾತನಾಡಿದ ಅವರು, “ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಾಕಿ ಆರ್ಡರ್ ಪಾಸ್ ಮಾಡಬೇಕಿರುವಂತಹ ಸರ್ವೇಗಳಿಗೆ ತಹಶೀಲ್ದಾರ್ ಆರ್ಡರ್ ಪಾಸ್ ಮಾಡಬೇಕು. ತದನಂತರ ಹಂತ-ಹಂತವಾಗಿ ಎಲ್ಲ ಒತ್ತುವರಿಗಳ ತೆರವು ಮಾಡಬೇಕು. ಯಾರಾದರು ತಡೆಯೊಡ್ಡಿದರೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಭೂ ಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂ ಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ರವರು ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು. ತದನಂತರ ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತೆರವು ಮಾಡಿ ರಾಜಕಾಲುವೆಗಳನ್ನು ನಿರ್ಮಾಣ ಮಾಡಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವು ಮಾಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

ಈ ವೇಳೆ, ವಲಯ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ರವೀಂದ್ರ, ಡಾ.ಹರೀಶ್ ಕುಮಾರ್, ಡಾ.ದೀಪಕ್, ಪ್ರೀತಿ ಗೆಹ್ಲೋಟ್ ಸೇರಿದಂತೆ ಎಲ್ಲ ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...