ಜನವರಿ 2ರಿಂದ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ

Date:

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.07 ರಷ್ಟಿದ್ದು, ಡಿ.29 ರಂದು 173 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರ ಜತೆಗೆ ರಾಜ್ಯದಲ್ಲಿ ಓಮಿಕ್ರಾನ್ ಉಪತಳಿ ಜೆಎನ್‌.1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳಲ್ಲಿ ಶೇ.90 ರಷ್ಟು ಜೆಎನ್‌.1 ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಹಿನ್ನೆಲೆ, 2024ರ ಜನವರಿ 2ರಿಂದ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ವ್ಯಾಕ್ಸಿನ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ನಿರ್ಧರಿಸಿದೆ. ಸದ್ಯ 15,800 ಲಸಿಕೆಯನ್ನು ರಾಜ್ಯ ಸರ್ಕಾರ ಈಗಾಗಲೇ ಖರೀದಿ ಮಾಡಿದ್ದು, ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಾಖಲಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳಲ್ಲಿ ಶೇ.90 ರಷ್ಟು ಒಮಿಕ್ರಾನ್ ರೂಪಾಂತರಿ ಜೆಎನ್‌.1 ಅಂಶ ಪತ್ತೆಯಾಗುತ್ತಿದ್ದು, ಈಗಾಗಲೇ ಆರೋಗ್ಯ ಇಲಾಖೆ 197 ಸ್ಯಾಂಪಲ್ಸ್​ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಮಾಡಲು ಕಳುಹಿಸಿದೆ. 60 ಸ್ಯಾಂಪಲ್ಸ್​ಗಳ ವರದಿ ಪ್ರಕಾರ ಶೇ.50 ರಷ್ಟು ರೋಗಿಗಳಲ್ಲಿ ಜೆಎನ್‌1 ಅಂಶ ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಈಗಾಗಲೇ ಮೊದಲ ಮತ್ತು ಎರಡನೇ ವ್ಯಾಕ್ಸಿನೇಶನ್ ಡೋಸ್‌ 100% ಮಾಡಲಾಗಿದೆ. ಆದರೆ, ಮುನ್ನೆಚ್ಚರಿಕಾ ವ್ಯಾಕ್ಸಿನ್(ಮೂರನೇ ಡೋಸ್) ಮಾತ್ರ ಶೇ.27 ಜನರು ಪಡೆದಿದ್ದಾರೆ. ಇನ್ನು ಈ ವ್ಯಾಕ್ಸಿನ್ ಹಾಕಿಸಿಕೊಳ್ಳಲು ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚಿನ ಜನ ಅರ್ಹತೆ ಪಡೆದಿದ್ದು, ಆದರೂ, ಮೂರನೇ ಡೋಸ್ ತೆಗೆದುಕೊಂಡಿಲ್ಲ. ಈ ಹಿನ್ನೆಲೆ, ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ವೃದ್ಧೆಗೆ ವಂಚನೆ | ರಾಕಲೈನ್ ವೆಂಕಟೇಶ್ ಪುತ್ರ ಅಭಿಲಾಷ್‌ಗೆ ಮತ್ತೆ ನೋಟಿಸ್ ನೀಡಿದ ಸಿಸಿಬಿ

ಇನ್ನು ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಯಾರು ಮೂರನೇ ಡೋಸ್ ವ್ಯಾಕ್ಸಿನ್ ಪಡೆದಿಲ್ಲ, ಅವರು ಕೂಡಲೇ ವ್ಯಾಕ್ಸಿನ್ ಹಾಕಿಸಿಕ್ಕೊಳ್ಳಲು ಸರ್ಕಾರ ಸೂಚಿಸಿದೆ. ಲಸಿಕೆಗಳನ್ನು ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ನೀಡಲು ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...