ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Date:

“ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತ ಚಲಾಯಿಸಬೇಕು” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಪ್ರಜಾಪ್ರಭುತ್ವವನ್ನು ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿಯನ್ನು ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವ ಸಮೂಹದಲ್ಲಿ ಮಾತ್ರವಿದ್ದು, ಅದನ್ನು ಸರಿಯಾಗಿ ಸದ್ಬಳಕೆ‌ ಮಾಡಬೇಕು” ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

“18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರ್ಜಿ ಸಲ್ಲಿಸಬಹುದು. ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಿದ್ದಾರೆ. ಜತೆಗೆ ವೋಟರ್ ಹೆಲ್ಪ್‌ ಲೈನ್ ಆಪ್ (Voter Help Line App) ಮೂಲಕ ಸ್ವಯಂಪ್ರೇರಿತವಾಗಿ ನೋಂದಣಿಯಾಗಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ದೊಡ್ಡ ವಿಷಯವಲ್ಲ, ಸೇರ್ಪಡೆಯಾದ ಬಳಿಕ ಪ್ರತಿ ಚುನಾವಣೆಯಲ್ಲಿ ತಮ್ಮ ಅತ್ಯಮೂಲ್ಯವಾದ ಮತವನ್ನು ತಪ್ಪದೆ ಚಲಾಯಿಸುವುದು ದೊಡ್ಡ ವಿಷಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮತ್ತೊಂದು ಸುರಂಗ ಕೊರೆದು ಹೊರ ಬಂದ ಟಿಬಿಎಂ ತುಂಗಾ

1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ

ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 4,000 ವಿದ್ಯಾರ್ಥಿಗಳಿದ್ದು, 1,000ಕ್ಕೂ ಹೆಚ್ಚು ಮಕ್ಕಳನ್ನು ಮತದಾರರ ಪಟ್ಟಿಯಲ್ಲಿ‌ ನೋಂದಣಿ ಮಾಡಿಸಲಾಗುತ್ತಿದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಸ್ವೀಪ್‌ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪೂರ್ಣಿಮಾ, ಕಾಲೇಜು‌ ಪ್ರಾಂಶುಪಾಲರಾದ ಡಾ. ವೈ ವೆಂಕಟೇಶಪ್ಪ, ಮತದಾರ ನೋಂದಣಿ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...