ಬೆಂಗಳೂರು | ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಪ್ರತಿಭಟನೆ

Date:

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಬೆಂಗಲೂರಿನಲ್ಲಿ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬೆಂಗಳೂರು ನಗರದಲ್ಲಿನ ಅನಿವಾಸಿ ಬಿಹಾರಿಗಳು ಭಾಗವಹಿಸಿದ್ದರು.

“ನಮ್ಮೆಲ್ಲರ ಕಾಳಜಿ ಈ ಪ್ರಕ್ರಿಯೆಗೆ ನಿಗದಿಪಡಿಸಿರುವ ಕಾಲಮಿತಿ, ಸಂಕೀರ್ಣ ದಾಖಲೀಕರಣ ಪ್ರಕ್ರಿಯೆಯು ತಾತ್ಕಾಲಿಕವಾಗಿ ಬಿಹಾರದಿಂದ ಹೊರಗಿರುವ ಮತದಾರರ ವಿವರವು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು, ನಿಗದಿತ ಸಮಯದಲ್ಲಿ ಜನ್ಮಸ್ಥಳದ ಮತ್ತು ಪೋಷಕರ ಮಾಹಿತಿಯನ್ನುಸಾಧ್ಯವಾಗುವುದಿಲ್ಲ. ನಾವು ನಾಗರೀಕರು, ನಾವು ಮತದಾರರು, ಉದ್ಯೋಗವನ್ನು ಅರಸಿ ಹೊರಬಂದಿರುವ ಒಂದೇ ಕಾರಣದಿಂದ ನಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಕಣ್ಮರೆಯಾಗಬಾರದು”

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ವಿಧಾನಸಭಾ ಚುನಾವಣೆಗಳು ಮುಗಿಯುವ ತನಕ ಮುಂದೂಡಬೇಕು. ಹಬ್ಬದ ಸಮಯದಲ್ಲಿ ಬಹುತೇಕ ವಲಸೆ ಕಾರ್ಮಿಕರು ವಾಪಸ್ಸು ಬರಲಿದ್ದು, ಮತ್ತಷ್ಟು ಸಮಯವನ್ನು ನೀಡಬೇಕು. ಪ್ರಾಮಾಣಿಕ ಮತದಾರರಿಗೆ ದಾಖಲಾತಿಗಳನ್ನು ಸಲ್ಲಿಸಲು ಮತ್ತು ಮತದಾರರ ಪಟ್ಟಿಯಲ್ಲಿ ಮನಸ್ಥಿತಿಯನ್ನು ಸತ್ಯಾಪನೆ ಮಾಡಲು ಹೆಚ್ಚು ಸಮಯ ಹಾಗೂ ಸಡಿಲಿಕೆಗಳನ್ನು ನೀಡಬೇಕು.

ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವ ಮತ್ತು ವಲಸೆ ಬಂದಿರುವ ಬಿಹಾರಿ ಮತದಾರರ ಹಕ್ಕುಗಳ ರಕ್ಷಣೆಗೆ ಸುಸ್ಥಿರವಾದ ಜನಾಭಿಪ್ರಾಯವನ್ನು ರೂಪಿಸಬೇಕು.ಈಗ ನಡೆಯುತ್ತಿರುವ ಪರಿಷ್ಕರಣಾ ಪ್ರಕ್ರಿಯೆಯಿಂದ ತಾತ್ಕಾಲಿಕವಾಗಿ ಬಿಹಾರದಿಂದ ಹೊರಗಿರುವ ಮತದಾರರ ವಿವರವು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು, ಇದರಿಂದ ಅನೇಕರಿಗೆ ಮತದಾನ ಸಾಧ್ಯವಾಗುವುದಿಲ್ಲ‌. ಇದು ನಡೆಯಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು

ಬಳಿಕ ಕೆ.ಆರ್ ಸರ್ಕಲ್ ಬಳಿ ಇರುವ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...