ನಮಗೆ ರಾಜಕೀಯ ಪ್ರಾತಿನಿಧ್ಯ ನೀಡುವುದು ಸರ್ಕಾರದ ಜವಾಬ್ದಾರಿ: ಅಕ್ಕೈ ಪದ್ಮಶಾಲಿ

Date:

  • ಲಿಂಗತ್ವ ಅಲ್ಪಸಂಖ್ಯಾತರ ವಿಚಾರ ಬರೀ ವಿವಾಹಕ್ಕೆ ಸಂಬಂಧಿಸಿದ್ದಲ್ಲ
  • ದೇಶದಲ್ಲಿ 10 ಕೋಟಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ

“ಲೈಂಗಿಕ ಅಲ್ಪಸಂಖ್ಯಾತರು ಯಾರ ಜತೆಗೆ ಸಂಬಂಧ ಬೆಳೆಸಬೇಕು. ಯಾರೊಂದಿಗೆ ವಿವಾಹವಾಗಬೇಕು. ಯಾವ ಬಟ್ಟೆ ಹಾಕಬೇಕು ಹಾಗೂ ಯಾವ ಊಟ ಮಾಡಬೇಕು ಎಂಬುದು ನಮ್ಮ ಇಷ್ಟ. ಅದನ್ನು ನಾವು ತಿರ್ಮಾನ ಮಾಡುತ್ತೇವೆ. ಇದು ಸರ್ಕಾರದ ತೀರ್ಮಾನವಲ್ಲ. ನಮಗೆ ರಾಜಕೀಯ ಪ್ರಾತಿನಿಧ್ಯ ನೀಡುವುದು ಮಾತ್ರ ಸರ್ಕಾರದ ಜವಾಬ್ದಾರಿಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು. ದೇಶದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹೇಳಿದರು.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಅವರು, “ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ನಾವು ಕೂಡ ವಿಧಾನಸಭೆ, ವಿಧಾನಪರಿಷತ್ತು, ಲೋಕಸಭೆ, ರಾಜ್ಯಸಭೆ ಸೇರಿದಂತೆ ಎಲ್ಲ ಶಾಸನಸಭೆಗಳಲ್ಲಿ ಭಾಗಿಯಾಗಬೇಕು. ನಮ್ಮ ವಿಚಾರಗಳ ಬಗ್ಗೆ ಚರ್ಚೆ ಮಾಡಲು ನಮ್ಮನ್ನು ಸಂಸತ್ತಿಗೆ ಬಿಡಬೇಕು” ಎಂದರು.

“ರಾಜಕೀಯ ಪ್ರಾತಿನಿಧ್ಯಕ್ಕಾಗಿ ಜೂನ್ 28ರಂದು ರಾಷ್ಟ್ರೀಯ ಆಂದೋಲನವನ್ನು ಉದ್ಘಾಟನೆ ಮಾಡಿದ್ದೇವೆ. ಏಕೆಂದರೆ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ಪ್ರಾತಿನಿಧ್ಯ ತುಂಬಾ ಮುಖ್ಯವಾಗಿದೆ. ಅದು ಅಗತ್ಯವಾಗಿ ಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗತ್ವ ಅಲ್ಪಸಂಖ್ಯಾತರ ವಿಚಾರ ಬರೀ ವಿವಾಹಕ್ಕೆ ಸಂಬಂಧಿಸಿದ್ದಲ್ಲ. ನಮ್ಮ ಹಕ್ಕುಗಳ ಬಗ್ಗೆ ತೀರ್ಮಾನ ಮಾಡಲು ಕೇಂದ್ರ ಸರ್ಕಾರಕ್ಕೆ ಬಿಟ್ಟುಬಿಡಿ ಎಂದು ಹೇಳಲಾಗುತ್ತಿದೆ. ಈಗಾಗಲೇ ಇವರು ಮಾಡಿರುವ ಕೆಲಸಗಳನ್ನು ನೋಡಿದರೆ ಅವು ಯಾವೂ ಕೂಡ ನಮ್ಮ ಪರವಾಗಿ ಇಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೋಬೋಟ್‌ ನೆರವಿನಿಂದ 30 ವರ್ಷದ ರೋಗಿಗೆ ಮಗುವಿನ ಮೂತ್ರಪಿಂಡ ಕಸಿ

“ನಮ್ಮ ಸಮುದಾಯದ ಬಗ್ಗೆ ಮಾತನಾಡುವಾಗ ನಮ್ಮವರು ಕೂಡ ಸಂಸತ್ತಿನಲ್ಲಿ ಇರಬೇಕು. ದೇಶದ ಜನಸಂಖ್ಯೆಯಲ್ಲಿ ಶೇ.10ರಷ್ಟು ನಾವಿದ್ದೇವೆ. ಅಂದರೆ, 130 ಕೋಟಿ ಜನಸಂಖ್ಯೆಯಲ್ಲಿ 10 ಕೋಟಿ ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. ಆ ಸಮುದಾಯಗಳ ಆಧಾರದ ಮೇಲೆ ನಮಗೆ ರಾಜಕೀಯ ಪ್ರಾತಿನಿಧ್ಯ ಬೇಕು. ಎಲ್ಲ ಪಕ್ಷದವರಿಗೂ ನಾವು ಈ ಬಗ್ಗೆ ಕೇಳುತ್ತಿದ್ದೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...