ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು

Date:

  • ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ
  • ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ನಗರದ ಹಲವೆಡೆ ಜೋರು ಮಳೆ ಸುರಿದಿದ್ದು, ಬಹುತೇಕ ಅಂಡರ್‌ಪಾಸ್‌ಗಳು ರಸ್ತೆಗಳು ನೀರಿನಿಂದ ತುಂಬಿದ್ದವು.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಯಂಕಾಲದ ವೇಳೆ ಮಳೆಯಿಂದ ತಪ್ಪಿಸಿಕೊಳ್ಳಲು ಜನರು ಅಂಗಡಿಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು. ಇನ್ನು ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಡರ್‌ಪಾಸ್‌ಗಳಲ್ಲಿ ಆಸರೆ ಪಡೆದಿದ್ದು ಕಂಡುಬಂದಿತು.

ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ, ಆಡುಗೋಡಿ, ರಾಜಾಜಿನಗರ, ಪ್ರಕಾಶನಗರ, ಮಲ್ಲೇಶ್ವರಂ, ವಿಜಯನಗರ, ಗೋವಿಂದರಾಜನಗರ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಡರ್‌ಪಾಸ್‌ ಸಂಪೂರ್ಣ ಜಲಾವೃತ

ಕಳೆದ ಕೆಲವು ದಿನಗಳ ಹಿಂದೆ ಕೆ ಆರ್‌ ಸರ್ಕಲ್ ಅಂಡರ್‌ಪಾಸ್‌ನ ನೀರಿನಲ್ಲಿ ಮುಳುಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿದ್ದಳು. ಈ ಘಟನೆ ನಡೆದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿರುವ ಅಂಡರ್‌ಪಾಸ್‌ಗಳಲ್ಲಿ ಅಪಾಯ ತಡೆಗೆ ಸರ್ವೇ ನಡೆಸಿತ್ತು. ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದೀಗ ನಿನ್ನೆ ರಾತ್ರಿ (ಸೋಮವಾರ) ಸುರಿದ ಅರ್ಧ ಗಂಟೆಯ ಮಳೆಗೆ ಕಾಡುಬೀಸನಹಳ್ಳಿ ಅಂಡರ್‌ಪಾಸ್‌ ಸಂಪೂರ್ಣ ನೀರಿನಿಂದ ತುಂಬಿ ಹೋಗಿತ್ತು. ಈ ವೇಳೆ, ವಾಹನಗಳು ಅಂಡರ್‌ಪಾಸ್‌ಗೆ ತೆರಳದಂತೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಲವಾರು ವಾಹನಗಳು ಅಂಡರ್‌ಪಾಸ್‌ಗೆ ತೆರಳಿ ವಾಪಸ್‌ ಅಂಡರ್‌ಪಾಸ್‌ನಿಂದ ತಿರುಗಿ ಬರಲು ಹರಸಾಹಸ ಪಡುವಂತಾಯಿತು.

ಮುಂದಿನ ನಾಲ್ಕು ದಿನ ಮಳೆ

ಈಗಾಗಲೇ ಕೇರಳಕ್ಕೆ ಮಾನ್ಸೂನ್ ಮಾರುತಗಳ ಆಗಮನವಾಗಿದ್ದು, ರಾಜ್ಯದಲ್ಲಿ ಕೆಲವೆಡೆ ಜೋರು ಮಳೆಯಾಗುತ್ತಿದೆ. ಇನ್ನೂ ಕೆಲವೆಡೆ ಮಳೆಯ ಆಗಮನಕ್ಕಾಗಿ ಜನರು ಕಾಯುತ್ತಿದ್ದಾರೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

“ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...