ರಾಜ್ಯ ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Date:

ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು ಎಂಬ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಹಾಗೂ ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರವು ಅಕ್ರಮವಾಗಿ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಕನ್ನಡಪರ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲ ಕೇಸ್‌ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು, “ಕನ್ನಡ ಪರ ಹೋರಾಟಗಾರರು ಯಾರ ಮೇಲಾದ್ರೂ ಹಲ್ಲೆ ಮಾಡಿದ್ದಾರಾ? ಕಾನೂನಿಗೆ ವಿರುದ್ಧವಾಗಿ ಹಾಕಿರುವ ನಾಮಫಲಕ ಕಿತ್ತುಹಾಕಿದ್ದಾರೆ. ನಿಯಮ ಪಾಲನೆಯಾಗಿಲ್ಲ ಎನ್ನುವುದನ್ನು ಎತ್ತಿ ತೋರಿಸಿದ್ದಾರೆ ಅಷ್ಟಕ್ಕೆ ಅವರನ್ನು ಬಂಧಿಸಲಾಗಿದೆ. ಕೋಟಿ ಕೋಟಿ ಲೂಟಿ ಮಾಡಿದವರು, ಭ್ರಷ್ಟಾಚಾರ ಮಾಡಿದವರನ್ನು ಸುಮ್ಮನೆ ಬಿಡುವ ಸರ್ಕಾರ, ನಾಡು ನುಡಿಗಾಗಿ ಧ್ವನಿ ಎತ್ತಿದವರನ್ನು ಬಂಧಿಸುತ್ತಿದೆ. ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎನ್ನುವ ನಿಯಮ ಇದ್ದರೂ ಯಾಕೆ ಪಾಲನೆಯಾಗುತ್ತಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಹೋರಾಟ ಮಾಡುವ ಮುನ್ನವೇ ಎಚ್ಚೆತ್ತು ಕನ್ನಡ ನಾಮಫಲಕ ಹಾಕದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಪ್ರತಿಭಟನೆ ಯಾಕೆ ನಡೆಯುತ್ತಿತ್ತು” ಎಂದು ಪ್ರಶ್ನಿಸಿದರು.

“ಕಾನೂನು ಪಾಲನೆಯಾಗಿಲ್ಲ ಅಂದಾಗ ಬಿಬಿಎಂಪಿ ಅಧಿಕಾರಿಗಳು ಆ ನಾಮಫಲಕಗಳನ್ನು ತೆರವು ಮಾಡಬೇಕಿತ್ತು. ಅವರ ನಿರ್ಲಕ್ಷ್ಯ ಇದಕ್ಕೆಲ್ಲ ಕಾರಣ. ಹೋರಾಟ ಮಾಡುವವರೆಗೂ ಸುಮ್ಮನೆ ಇದ್ದು, ಈಗ ಫೆಬ್ರುವರಿ 28ರವರೆಗೆ ಗಡುವು ನೀಡಲಾಗಿದೆ. ರಾಜ್ಯದಾದ್ಯಂತ ಎಲ್ಲ ಕಡೆ ನಾಮಫಲಕಗಳಲ್ಲಿ ನಿಯಮದಂತೆ ಕನ್ನಡ ಕಡ್ಡಾಯ ಆಗಬೇಕು” ಎಂದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, “ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಎಂ.ಬಿ.ಪಾಟೀಲ್ ಅವರು ಯಾರ ಪರವಾಗಿ ಇದ್ದೀರಾ? ನಾಡದ್ರೋಹಿಗಳು, ಶ್ರೀಮಂತರು, ನೆಲದ ಕಾನೂನು ಪಾಲಿಸದವರ ಪರವಾಗಿ ನಿಲ್ಲಬೇಡಿ. ಹೀಗೆ, ಮಾಡಿದ್ರೆ ಬಂಡವಾಳ ಹೂಡಲ್ಲ ಅನ್ನುವ ಸಬೂಬು ಹೇಳುವುದು ಬಿಡಿ. ನಿಮಗೆ ಕಿಕ್ ಬ್ಯಾಕ್ ಬರುತ್ತೆ ಎಂದು ರಾಜ್ಯವನ್ನು ಬಲಿ ಕೊಡಬೇಡಿ. ಭಾಷೆಗೆ ಧಕ್ಕೆ ತರಬೇಡಿ” ಎಂದು ಎಚ್ಚರಿಕೆ ನೀಡಿದರು.

“ಕನ್ನಡ, ಕನ್ನಡಿಗರು, ಕರ್ನಾಟಕ ಹಾಳಾಗಿ ಹೋದರೂ ಚಿಂತೆಯಿಲ್ಲ ನನಗೆ ಬರಬೇಕಾದ ಕಿಕ್‌ ಬ್ಯಾಕ್ ಬರಲಿ ಎನ್ನುವಂತೆ ಸಚಿವ ಎಂಬಿ ಪಾಟೀಲ್ ಮಾತನಾಡಿದ್ದಾರೆ. ಇಂತಹ ಸರ್ಕಾರ ನಮಗೆ ಬೇಕಾ” ಎಂದು ಅವರು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷದ ಸಂಭ್ರಮ | ತಡರಾತ್ರಿ 2:15 ರವರೆಗೂ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

“ರಾಜ್ಯದಾದ್ಯಂತ ಹೋರಾಟವನ್ನು ವಿಸ್ತರಿಸಲಾಗುವುದು. ಕಾನೂನು ಪ್ರಕಾರವೇ ನಮ್ಮ ಹೋರಾಟ ನಡೆಯಲಿದೆ. ನಾಮಫಲಕ ಮಾತ್ರವೇ ಅಲ್ಲ, ಕನ್ನಡಿಗರಿಗೆ ಉದ್ಯೋಗ ಬೇಕು. ಶಿಕ್ಷಣದಲ್ಲಿ ಕನ್ನಡ ಬೇಕು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಆದ್ಯತೆ ಸಿಗಬೇಕು ಅಲ್ಲಿವರೆಗೂ ಹೋರಾಟ ಮುಂದುವರೆಯಲಿದೆ” ಎಂದು ಮೋಹನ್ ದಾಸರಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಡಾ. ರಮೇಶ್ ಬೆಲ್ಲಂಕೊಂಡ, ಜಗದೀಶ್ ವಿ ಸದಂ, ಜಗದೀಶ್ ಚಂದ್ರ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...