ಇ-ಖಾತಾ ಮಾಡಿಸಿಕೊಳ್ಳಲು ಸಮಯ ನಿಗದಿ ಇಲ್ಲ, ಗೊಂದಲಕ್ಕೆ ಸಚಿವ ಕೃಷ್ಣ ಬೈರೇಗೌಡ ತೆರೆ

Date:

ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಡೆಡ್ಲೈನ್ ಇಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಗೊಂದಲಕ್ಕೆ ತೆರೆ ಎಳೆದರು.

“ನಕಲಿ ನೋಂದಣಿ ಪ್ರಕರಣಗಳನ್ನು ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಯಿಂದಲೇ ಪಡೆಯಬಹುದು ಇ-ಖಾತಾ

“ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು. ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು” ಎಂದು ಅವರು ತಿಳಿಸಿದರು.

ಇ-ಖಾತಾ ಹೆಲ್ಪ್ ಡೆಸ್ಕ್

“ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಆಸ್ತಿ ಮಾಲೀಕರು ಯಾವುದೇ ಗೊಂದಲವಿಲ್ಲದೆ, ಸುಲಭವಾಗಿ ಇ-ಖಾತಾ ಪಡೆಯುವ ಸಲುವಾಗಿ ತತಕ್ಷಣ ಜಾರಿಯಾಗುವಂತೆ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ (ARO Office) ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ” ಎಂದರು.

“ಅಲ್ಲದೆ, ಇ-ಖಾತಾ ಪಡೆಯಲು ಆಸ್ತಿ ಮಾಲೀಕರು ಕೆಲವು ದಾಖಲೆಗಳನ್ನು ನೀಡುವುದು ಅಗತ್ಯವಾಗಿದ್ದು, ಅವುಗಳನ್ನು ʼಬೆಂಗಳೂರು ಒನ್ʼ ಕಚೇರಿಗಳ ಮುಖಾಂತರ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಮುಂದಿನ ಎರಡು-ಮೂರು ದಿನಗಳಲ್ಲಿ ಬೆಂಗಳೂರು-ಒನ್ ಕಚೇರಿಗಳಲ್ಲಿ ಈ ಸೌಲಭ್ಯವನ್ನು ಒದಗಿಸಲಾಗುವುದು” ಎಂದು ಹೇಳಿದರು.

ಮಧ್ಯವರ್ತಿಗಳ ಹಾವಳಿ-ನಕಲಿ ನೋಂದಣಿಗೆ ಶಾಶ್ವತ ಪರಿಹಾರ

“ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ನಕಲಿ ನೋಂದಣಿಗಳನ್ನು ತಪ್ಪಿಸಿ, ಆಸ್ತಿ ಮಾಲೀಕರ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ. ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿರುವುದು ನಿಜ. ಆದರೆ, ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಲ್ಲದೆ ಬದುಕಬಹುದು. ಸಾರ್ವಜನಿಕರ ಅನುಕೂಲಕ್ಕಾಗಿಯೇ ಹಲವು ಸವಾಲುಗಳ ನಡುವೆಯೂ ಈ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದು ನಕಲಿ ನೋಂದಣಿಗಳನ್ನು ತಡೆಯುವುದಕ್ಕೂ ಇದು ಸಹಕಾರಿಯಾಗಲಿದೆ. ಇ-ಖಾತಾ ವ್ಯವಸ್ಥೆಯನ್ನು ಒಂದು ಬಾರಿ ಅನುಷ್ಠಾನ ಮಾಡಿದರೆ, ಇಡೀ ದೇಶದಲ್ಲಿ ಅತ್ಯುತ್ತಮ ಮಾದರಿ ಖಾತಾ ವ್ಯವಸ್ಥೆಯನ್ನು ನೀಡಿದಂತಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ” ಎಂದು ಸಚಿವರು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...