ಬಿಡದಿವರೆಗೂ ನಮ್ಮ ಮೆಟ್ರೋ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್

Date:

ರಾಜ್ಯ ರಾಜಧಾನಿ ಬೆಂಗಳೂರಿನ ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜನರ ಓಡಾಟಕ್ಕೆ ಅನುಕೂಲವಾಗಲೂ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಜತೆಗೆ ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ನ.10 ರಂದು ಉದ್ಘಾಟನೆ ಮಾಡಿ ಮಾತನಾಡಿದ ಅವರು, “ನಾನು ಬರೀ ಇಲ್ಲಿ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದಿಲ್ಲ. ಜತೆಗೆ ಎರಡು ಮಹತ್ವದ ಘೋಷಣೆ ಮಾಡಲಿದ್ದೇನೆ. ಮುಂದಿನ ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಮುಖವಾಗಿ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗಿದೆ” ಎಂದು ಹೇಳಿದರು.

“ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಮಾಗಡಿ ಶಾಸಕ ಬಾಲಕೃಷ್ಣ ಹಾಗೂ ಸಂಸದ ಡಿಕೆ ಸುರೇಶ್ ಅವರು ಮೆಟ್ರೋಗಾಗಿ ಬೆನ್ನು ಬಿದ್ದಿದ್ದಾರೆ. ಬಿಎಂಆರ್‌ಸಿಎಲ್‌ಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ. ಬೆಂಗಳೂರಿನ ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು. ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು. ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

“ಮೆಟ್ರೋ ಸದ್ಯದಲ್ಲೇ ಬಿಡದಿಗೆ ಬರಲು ಸರ್ವೆ ಕಾರ್ಯ ಶುರುವಾಗಲಿದೆ. ಬೆಂಗಳೂರಿನ ಶಕ್ತಿಯನ್ನು ಬಿಡದಿಗೆ ನೀಡಲಾಗುವುದು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...