ರಾಮೇಶ್ವರಂ ಕೆಫೆ ರೀತಿ 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಕರೆ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಬೆದರಿಕೆ ಕರೆ ಬಂದಿದೆ. ರಾಮೇಶ್ವರಂ ಕೆಫೆ ರೀತಿ ಬಾಂಬ್ ಸ್ಫೋಟ ಮಾಡುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಗಣರಾಜ್ಯೋತ್ಸವದಂದು ನಗರದ ಆರು ಜನ ಗಣ್ಯರ ಮನೆ ಸ್ಪೋಟಿಸುವುದಾಗಿ ಹೇಳಿದ್ದಾನೆ.

ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದೀಗ ಬಂದ ಮಾಹಿತಿ ಪ್ರಕಾರ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್‌ ಸ್ಪೋಟ ಮಾಡುವುದಾಗಿ ಹುಸಿ ಬಾಂಬ್ ಕರೆ ಬಂದಿದೆ. ಇದೊಂದು ಹುಸಿ ಬಾಂಬ್‌ ಕರೆಯಾದರೂ ಸಹ ಮುನ್ನೆಚ್ಚರಿಕೆಯಾಗಿ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಇನ್ನು ಅಪರಿಚಿತ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಆರು ಜನರ ಹೆಸರು, ವಿಳಾಸವನ್ನು ಆಯ ವ್ಯಾಪ್ತಿಯ ಪೊಲೀಸ್‌ ಠಾಣೆಗೆ ಕಳುಹಿಸಿದ್ದಾರೆ. ಇನ್ನು ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತರ ನಿಯಂತ್ರಣ ಕೊಠಡಿಗೆ ಬಂದ ಹುಸಿ ಬಾಂಬ್ ಬೆದರಿಕೆ ಕರೆ ಭದ್ರತಾ ಕಳವಳ ಹುಟ್ಟುಹಾಕಿದೆ.

ಗಣರಾಜ್ಯೋತ್ಸವ ಮುನ್ನವೇ ಈ ರೀತಿ ಬೆದರಿಕೆ ಬಂದಿದ್ದು, ಪೊಲೀಸ್ ಇಲಾಖೆಯನ್ನು ತಲ್ಲಣಗೊಳಸಿದೆ. ಹೀಗಾಗಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...