20 ದಿನದ ಮಗು ಕೊಲ್ಲುತ್ತೇನೆಂದು ಬೆದರಿಕೆ; ಬಾವನನ್ನು ಕೊಂದ ಬಾಮೈದ

Date:

ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ತನ್ನ 20 ದಿನದ ಮಗುವನ್ನು ಕೊಲ್ಲುವುದಾಗಿ ಚಾಕು ಹಿಡಿದು ಬೆದರಿಕೆ ಹಾಕಿದ್ಧಾನೆ. ಇದರಿಂದ ಆಕ್ರೋಶಗೊಂಡ ಆತನ ಪತ್ನಿಯ ಸಹೋದರರು ಆತನನ್ನೇ ಹತ್ಯೆಗೈದಿದ್ದಾರೆ. ಘಟನೆ ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದಿದೆ.

ಸಿದ್ದಾಪುರ ನಿವಾಸಿ ಸಲ್ಮಾನ್ ಖಾನ್ (29) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಆಯೆಷಾ ಅವರ ಸಹೋದರರಾದ ಉಮರ್, ಶೊಯೇಬ್ ಹಾಗೂ ಅನ್ವರ್ ಕೊಲೆಗೈದಿರುವ ಆರೋಪಿಗಳು ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಯೆಷಾ ಅವರಿಗೆ 20 ದಿನಗಳ ಹಿಂದೆಯಷ್ಟೇ ಹೆರಿಗೆಯಾಗಿತ್ತು. ತನ್ನ ತವರು ಮನೆಯ ನೆರವಿನಿಂದ ಮಗುವನ್ನು ಸಲಹುತ್ತಿದ್ದರು. ಆದಾಗ್ಯೂ, ಸಲ್ಮಾನ್ ಹಲವು ದಿನಗಳಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ದುಡಿಮೆ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ದಿನನಿತ್ಯ ಸಲ್ಮಾನ್ ತನ್ನ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಸಂಜೆಯೂ ದಂಪತಿಗಳ ನಡುವೆ ಜಗಳವಾಗಿದೆ. ಈ ವೇಳೆ, ಚಾಕು ಹಿಡಿದು ಮಗುವನ್ನು ಕೊಲ್ಲುವುದಾಗಿ ಸಲ್ಮಾನ್ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಆಯೆಷಾ ತನ್ನ ಸಹೋದರರಿಗೆ ಕರೆ ಮಾಡಿ, ಮನೆಗೆ ಕರೆಸಿಕೊಂಡಿದ್ದಾರೆ. ಆಗಲೂ ಸಲ್ಮಾನ್ ಮತ್ತೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದು, ಆಯೆಷಾ ಸಹೋದರರು ಆ ಚಾಕುವನ್ನು ಕಸಿದುಕೊಂಡು ಆತನಿಗೇ ಚುಚ್ಚಿದ್ದಾರೆ. ಬಳಿಕ, ಆಸ್ಪತ್ರೆಗೆ ರವಾಸಲಾಗಿದ್ದರೂ, ಚಿಕಿತ್ಸೆ ಫಲಿಸದೆ ಸಲ್ಮಾನ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೈದ ಆರೋಪದ ಮೇಲೆ ಆಯೆಷಾ ಅವರ ಮೂವರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...