ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಬಗ್ಗೆ ಜನರಿಂದ ಸಲಹೆ ಪಡೆಯಲು ಬಿಬಿಎಂಪಿಯಿಂದ ಮೂರು ದಿನ ಸಭೆ

Date:

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸುವ ಸಲುವಾಗಿ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದು, ವಲಯವಾರು ಸಭೆಗಳನ್ನು ಆಯೋಜಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ.

ಪೂರ್ವ ವಲಯ:

ಪೂರ್ವ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ವಸಂತನಗರ ತಿಮ್ಮಯ್ಯ ರಸ್ತೆಯಲ್ಲಿ ಬರುವ ಬಂಜಾರ ಭವನದಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಮಹದೇವಪುರ ವಲಯ:

ಮಹದೇವಪುರ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ಕೆ.ಆರ್ ಪುರ ಟಿಸಿ ಪಾಳ್ಯದ ಹತ್ತಿರವಿರುವ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯ:

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಜೆ.ಪಿ ನಗರ 1ನೇ ಹಂತದಲ್ಲಿ ಬರುವ ಆರ್.ವಿ ಡೆಂಟಲ್ ಕಾಲೇಜಿನಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯ:

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಡಾ. ಹೆಚ್. ನರಸಿಂಹತ್ತ ಸಭಾಂಗಣದಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಯಲಹಂಕ ಹಾಗೂ ದಾಸರಹಳ್ಳಿ ವಲಯ:

ಯಲಹಂಕ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ 12ನೇ ಫ್ರೆಬ್ರವರಿ 2025 ರಂದು ಯಲಹಂಕ ನ್ಯೂಟೌನ್ ನಲ್ಲಿ ಬರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ 5 ಕಡೆ ಪಾಲಿಕೆಯ ಎಲ್ಲಾ ಎಂಟು ವಲಯಗಳಿಗೆ ಸಂಬಂಧಿಸಿಂತೆ ಸಭೆ ನಡೆಯಲಿದ್ದು, ಈ ಸಭೆ ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳು ಹಾಗು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚಿನ ಸಮಖ್ಯೆಯಲ್ಲಿ ಆಗಮಿಸಿ ತಮ್ಮ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಬಿಬಿಎಂಪಿ ಪ್ರಕಟಣೆಯಲ್ಲಿ ಕೋರಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...