ಗುರುವಾರ | ಯೋಗೀಶ್ ಮಾಸ್ಟರ್ ಅವರ ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಬಿಡುಗಡೆ

Date:

ಸಿನಿಮಾ ನಿರ್ದೇಶಕ, ಸಾಮಾಜಿಕ ಚಿಂತಕ ಯೋಗೀಶ್ ಮಾಸ್ಟರ್ ಅವರು ಬರೆದಿರುವ ‘ನನ್ನ ಅರಿವಿನ ಪ್ರವಾದಿ’ ಪುಸ್ತಕವು ಸೆ.28ರಂದು ಲೋಕಾರ್ಪಣೆಗೊಳ್ಳಲಿದೆ.

ಮಂಗಳೂರಿನ ಶಾಂತಿ ಪ್ರಕಾಶನವು ಪುಸ್ತಕವನ್ನು ಪ್ರಕಟಿಸಿದೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡಣದ ಬಿಫ್ಟ್ ಅಡಿಟೋರಿಯಂನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಪುಸ್ತಕವನ್ನು ಕರ್ನಾಟಕ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

ಕೃತಿಯ ಕುರಿತು ಸುಧಾ ಮತ್ತು ಮಯೂರ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ ಅವರು ಮಾನತಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ, ಸಾಹಿತಿ ಡಾ. ವಸುಂಧರಾ ಭೂಪತಿ, ಯೋಗೀಶ್ ಮಾಸ್ಟರ್, ಜಮಾಅತೆ ಇಸ್ಲಾಮೀ ಹಿಂದ್‌ನ ಜನಾಬ್ ಮುಹಮ್ಮದ್ ಕುಂಞ ಅವರು ಭಾಗವಹಿಸಲಿದ್ದಾರೆ. ಶಾಂತಿ ಪ್ರಕಾಶನದ ಅಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶಾಂತಿ ಪ್ರಕಾಶನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನನ್ನ ಅರಿವಿನ ಪ್ರವಾದಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...