ದುಪ್ಪಟ್ಟು ಹಣ ಕೀಳುವ ಆಟೋ ಚಾಲಕರ ಪರ್ಮಿಟ್‌ ರದ್ದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

Date:

ನಿಗದಿ ಪಡಿಸಿದ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಹಾಗೂ ಬಾಡಿಗೆಗೆ ತೆರಳಲು ನಿರಾಕರಿಸುವ ಆಟೊಗಳ ಪರ್ಮಿಟ್‌ ರದ್ದುಪಡಿಸಿ, ಸಂಬಂಧಪಟ್ಟ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದಲ್ಲಿರುವ ಆಪ್‌ ಆಧಾರಿತ ಹಾಗೂ ಇತರೆ ಆಟೊ ಚಾಲಕರು ನಿಗದಿಗಿಂತ ಅಧಿಕ ದರಕ್ಕೆ ಬೇಡಿಕೆ ಇಡುವುದು, ಅಧಿಕ ಬಾಡಿಗೆ ನೀಡಲು ನಿರಾಕರಿಸಿದರೆ ಪ್ರಯಾಣ ರದ್ದುಗೊಳಿಸುವುದು ಹಾಗೂ ಅತಿ ಹೆಚ್ಚು ದರ ವಸೂಲಿ ಮಾಡುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇಂತಹ ದೂರುಗಳಿಗೆ ತಕ್ಷಣ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.

ಬಾಡಿಗೆಗೆ ತೆರಳಲು ನಿರಾಕರಿಸುವ ಹಾಗೂ ಅಧಿಕ ಪ್ರಯಾಣ ದರಕ್ಕೆ ಬೇಡಿಕೆ ಇಡುವ ಆಟೋ ಚಾಲಕರ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಾರೆ. ಆದಾಗ್ಯೂ, ಸಾರ್ವಜನಿಕರಿಂದ ದೂರುಗಳು ಬರುತ್ತಲೇ ಇವೆ. ಇತ್ತೀಚೆಗೆ ರ‍್ಯಾಪಿಡೋ ಆ್ಯಪ್‌ನಲ್ಲಿಆಟೊ ಬುಕ್‌ ಮಾಡಿದ ಪ್ರಯಾಣಿಕರಿಂದ ಪ್ರತಿ ಕಿ.ಮೀ ಗೆ 100.89 ರೂ., ಓಲಾ ಆ್ಯಪ್‌ನಲ್ಲಿ4 ಕಿ.ಮೀ ದೂರದ ಪ್ರಯಾಣಕ್ಕೆ 184.19 ರೂ. ಪಡೆಯಲಾಗಿದೆ. ಈ ರೀತಿಯ ಹಗಲು ದರೋಡೆ ಅಕ್ಷಮ್ಯ. ಇಂತಹ ಆಟೋಗಳ ಪರ್ಮಿಟ್‌ ರದ್ದುಗೊಳಿಸಿ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಬೆಂಗಳೂರಿನಲ್ಲಿ ಮೀಟರ್ ಹಾಕದೇ ದುಬಾರಿ ಹಣ ಕೇಳುತ್ತಿರುವ ಆಟೋ ಚಾಲಕರ ವಿರುದ್ಧ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. 2-3 ಕಿ.ಮೀ ದೂರದ ಹತ್ತಿರದ ಸ್ಥಳಗಳಿಗೂ ಆಟೋ ಚಾಲಕರು 200 300 ರೂಗಳನ್ನು ಕೇಳುತ್ತಿದ್ದಾರೆ ಎಂದು ಗ್ರಾಹಕರು ಆರೋಪಿಸುತ್ತಿದ್ದಾರೆ.

ಅಲ್ಲದೆ ಮೀಟರ್ ಇದ್ದರೂ ಮೀಟರ್ ಹಾಕದೇ ಬಾಯಿಗೆ ಬಂದ ಹಾಗೆ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇಂತಹ ದೂರುಗಳ ಹಿನ್ನಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...