ಭಾರೀ ಮಳೆ | ಬೆಂಗಳೂರಿನಲ್ಲಿ ಮತ್ತೆ ಇಬ್ಬರ ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

Date:

ಮಳೆ ನೀರನ್ನು ತೆರವುಗೊಳಿಸುವ ಸಂದರ್ಭದಲ್ಲಿ ಇಬ್ಬರು ವಿದ್ಯುತ್ ಆಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಗ್ನೇಯದಲ್ಲಿರುವ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಈ ಮೂಲಕ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮೃತರನ್ನು ಮನಮೋಹನ್ ಕಾಮತ್ (63) ಮತ್ತು ದಿನೇಶ್ (12) ಎಂದು ಗುರುತಿಸಲಾಗಿದೆ. ಬಿಟಿಎಂ 2ನೇ ಹಂತದ ಬಳಿಯ ಎನ್ಎಸ್ ಪಾಳ್ಯದ ಮಧುವನ್ ಅಪಾರ್ಟ್‌ಮೆಂಟ್ ನಿವಾಸಿ ಕಾಮತ್ ಅವರು ಸಂಜೆ 6.15ರ ಸುಮಾರಿಗೆ ಮಳೆಯಿಂದಾಗಿ ನೆಲಮಾಳಿಗೆಯಲ್ಲಿ ಸಂಗ್ರಹವಾದ ನೀರನ್ನು ತೆರವುಗೊಳಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ; ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ಮೋಟಾರ್ ತಂದು ನೀರನ್ನು ಪಂಪ್ ಮಾಡಲು ಪ್ರಯತ್ನಿಸಿದಾಗ, ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲೇ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ನೇಪಾಳದ ವ್ಯಕ್ತಿಯ ಪುತ್ರ ದಿನೇಶ್ ಕೂಡಾ ಮೃತಪಟ್ಟಿದ್ದಾನೆ. ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಕೆಲವು ನಿವಾಸಿಗಳು ಮೋಟಾರ್ ಸಂಪರ್ಕವನ್ನು ಕಡಿತಗೊಳಿಸಿ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಇಬ್ಬರು ಮೃತಪಟ್ಟಿರುವುದಾಗಿ ಘೋಷಿಸಿದರು. ಸದ್ಯ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ಸೋಮವಾರ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಕುಸಿದು ಶಶಿಕಲಾ(35) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...