ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ; ಬಳಕೆದಾರರ ಶುಲ್ಕ ಹಿಂಪಡೆಯಲು ಆರ್‌ ಅಶೋಕ್ ಆಗ್ರಹ

Date:

ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ದೇಶದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಈ ರೀತಿ ಎರಡು ಬಗೆಯ ತೆರಿಗೆ ವಿಧಿಸಲಾಗುತ್ತಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ.

ಬಿಬಿಎಂಪಿ ಕಚೇರಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರ್ಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ” ಎಂದು ಟೀಕಿಸಿದ್ದಾರೆ.

“ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರ್ಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್‌ ಸಂಗ್ರಹಿಸಬೇಕು. ಆದರೆ, ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‌ಗಳ ದರ ಹೆಚ್ಚಲಿದೆ. ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್‌ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...