ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಸಜ್ಜಾದ ಎನ್‌ಎಚ್‌ಎಐ

Date:

  • ಎಕ್ಸ್‌ಪ್ರೆಸ್‌ ವೇ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು
  • ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟ

ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ಮೂಲಕ 90 ನಿಮಿಷಗಳಲ್ಲಿ ಎರಡು ನಗರಗಳಲ್ಲಿ ಯಾವುದಾದರೂ ನಗರವನ್ನು ತಲುಪುವ ಭರವಸೆಯನ್ನು ಈ ಎಕ್ಸ್‌ಪ್ರೆಸ್‌ ವೇ ವಾಹನ ಸವಾರರಿಗೆ ನೀಡಿದೆ. ಆದರೆ, ಈ ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಜ್ಜಾಗಿದೆ.

ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಮತ್ತು ಕೃಷಿ ವಾಹನಗಳು ಹೆದ್ದಾರಿಯ ಪ್ರವೇಶ ನಿಯಂತ್ರಿತ ಭಾಗದಲ್ಲಿ ಸಂಚರಿಸಲು ಅನುಮತಿಸುವುದಿಲ್ಲ. ಸುರಕ್ಷತಾ ಕಾರಣಗಳಿಗಾಗಿ ಈ ರೀತಿಯ ವಾಹನಗಳನ್ನು ನಿಷೇಧಿಸುವ ಪ್ರಸ್ತಾವನೆಯು ಪರಿಗಣನೆಯಲ್ಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

“ಸರ್ಕಾರದಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟವಾಗುತ್ತದೆ. ಸರ್ಕಾರದಿಂದ ಅನುಮೋದನೆ ದೊರೆತ ಬಗ್ಗೆ ಖಚಿತವಾಗುತ್ತದೆ. ಎಕ್ಸ್‌ಪ್ರೆಸ್‌ವೇಯ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು” ಎಂದು ಎನ್‌ಎಚ್‌ಎಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಸೈಕಲ್‌ಗಳನ್ನು ಅನುಮತಿಸಲಾಗುತ್ತಿದೆ. ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ ನಂತರ ಮಾತ್ರ ಅವುಗಳನ್ನು ನಿಲ್ಲಿಸಲಾಗುವುದು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮೂಗಿಗೆ ತುಪ್ಪ ಸವರುವ ಕೆಲಸ: ಮುಖ್ಯಮಂತ್ರಿ ಚಂದ್ರು

ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿ, “ಟ್ರಕ್‌ಗಳು ಎಡ ಪಥದಲ್ಲಿ ಚಲಿಸಬೇಕು. ಮಧ್ಯದ ಲೇನ್‌ಗಳನ್ನು ಕಾರುಗಳು ಬಳಸಬೇಕು. ಬಲಭಾಗದ ಲೇನ್ ಅನ್ನು ಓವರ್‌ಟೇಕ್ ಮಾಡಲು ಮುಕ್ತವಾಗಿ ಬಿಡಬೇಕು. ಬದಲಿಗೆ, ಟ್ರಕ್‌ಗಳು ಬಲಭಾಗದಲ್ಲಿ ಚಲಿಸುತ್ತಿವೆ. ಆದ್ದರಿಂದ, ಕಾರುಗಳು ಹಿಂದಿಕ್ಕಲು ಕಷ್ಟವಾಗುತ್ತಿದೆ. ಎಕ್ಸ್‌ಪ್ರೆಸ್‌ ವೇಯಲ್ಲಿ ರಸ್ತೆ ಶಿಸ್ತು ಮತ್ತು ನಾಗರಿಕ ಪ್ರಜ್ಞೆಯ ಕೊರತೆಯಿದೆ” ಎಂದರು.

“ಸುಮಾರು ಮೂರು ದಿನಗಳ ಹಿಂದೆ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಒಂದೇ ಕುಟುಂಬದ 5 ಮಂದಿ ಸಾವಿಗೀಡಾಗಿದ್ದಾರೆ. ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...