ಬೆಂಗಳೂರು | ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರ ದಾರುಣ ಸಾವು

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಹರಿದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ. ಆರ್. ಸರ್ಕಲ್ ಸಮೀಪ ನಡೆದಿದೆ.

ಭಾನುವಾರ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್, ಶಿಲ್ಪಾ ಅವರನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಪ್ರಶಾಂತ್, ಆಂಧ್ರ ಪ್ರದೇಶ ಮೂಲದ ಬಯನ್ನ ಗಾರಿ ಶಿಲ್ಪಾ ಟಿಸಿಎಸ್ ಕಂಪನಿ ಉದ್ಯೋಗಿಗಳಾಗಿದ್ದರು. ಭಾನುವಾರ ಊಟಕ್ಕಾಗಿ ಹೊರಗೆ ಬಂದಿದ್ದರು. ಈ ವೇಳೆ ಕೆ. ಆರ್. ಸರ್ಕಲ್ ಬಳಿ ತೆರಳುವಾಗ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿಬಿಎಂಪಿ ಕಸದ ಲಾರಿ ಅವೈಜ್ಞಾನಿಕ ಪಾರ್ಕಿಂಗ್; ಬೈಕ್ ಸವಾರ ಸಾವು

ಇನ್ನು ಅಪಘಾತದ ಬಳಿಕ ಬಿಬಿಎಂಪಿ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಲಾರಿ ಚಾಲಕನ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ಮೃತ ಟೆಕ್ಕಿ ಪ್ರಶಾಂತ್ ತಂದೆ ಲೋಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಮಗ ಇದೇ ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಜನಿಸಿದ್ದ. ಈಗ ಇಲ್ಲೇ ಸಾವನ್ನಪ್ಪಿದ್ದಾನೆ. ಈ ಅಪಘಾತ ಮಾಡಿದ ಲಾರಿ ಚಾಲಕನನ್ನು ಕೂಡಲೇ ಬಂಧಿಸಬೇಕು. ನಮಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

2022ರ ಮಾರ್ಚ್‌ನಿಂದ ಮೇ ತಿಂಗಳವರೆಗಿನ ಅವಧಿಯಲ್ಲಿ ಬಿಬಿಎಂಪಿ ಲಾರಿ ಹರಿದು ಸಾವು ಸಂಭವಿಸಿದ ನಾಲ್ಕು ಪ್ರಕರಣಗಳು ನಡೆದಿದೆ. 2022ರ ಏಪ್ರಿಲ್ ತಿಂಗಳಿನಲ್ಲಿ ಕಸದ ಲಾರಿ ದ್ವಿಚಕ್ರ ವಾಹನ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

ಅದಾದ ಬಳಿಕ 2022ರ ಮಾರ್ಚ್‌ 21ರಂದು ಬಿಬಿಎಂಪಿ ಕಸದ ಲಾರಿ ಅಪಘಾತದಲ್ಲಿ 14 ವರ್ಷದ ಬಾಕಿ ಸಾವನ್ನಪ್ಪಿದ್ದಳು. ಅದೇ ತಿಂಗಳ 31ರಂದು ನಡೆದ ಅಪಘಾತದಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಬಳಿಕ 2022ರ ಮೇ ತಿಂಗಳಿನಲ್ಲಿ ನಡೆದ ಪ್ರಕರಣದಲ್ಲಿ ಡೆಲಿವರಿ ಬಾಯ್ ಒಬ್ಬರು ಸಾವನ್ನಪ್ಪಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...