ಗಾಂಧಿ ಬಜಾರ್‌ನಲ್ಲಿ ಅನಧಿಕೃತ ಪಾದಚಾರಿ ಮಾರ್ಗ ಒತ್ತುವರಿ ತೆರವು

Date:

ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದರು.

ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಚಿಕ್ಕಪೇಟೆ ಕಾರ್ಯಪಾಲಕ ಅಭಿಯಂತರರಾದ ಪ್ರದೀಪ್ ಕುಮಾರ್ ನೇತೃತ್ವದ ತಂಡವು ಬುಧವಾರ ಬೆಳಿಗ್ಗೆ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿತು.

ಗಾಂಧಿ ಬಜಾ‌ರ್‌ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸುಮಾರು 120 ಮಳಿಗೆಗಳಿಗೆ ಸ್ಥಳ ಗುರುತಿಸಿ ಆ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ನಿಗದಿಪಡಿಸಿರುವ ಸ್ಥಳ ಬಿಟ್ಟು ಹೆಚ್ಚುವರಿ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒತ್ತುವರಿ ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಿದ್ದರೂ ತೆರವುಗೊಳಿಸಿರಲಿಲ್ಲ. ಈ ನಿಟ್ಟಿನಲ್ಲಿ ಇಂದು ಪಾದಚಾರಿ ಮಾರ್ಗ ತೆರವು ಕಾರ್ಯ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ವೇಳೆ 2 ಜೆಸಿಬಿ, 7 ಟ್ರ್ಯಾಕ್ಟರ್ ಗಳು, 3 ಲಾರಿ ಗಳು ಹಾಗೂ 40 ಸಿಬ್ಬಂದಿಗಳನ್ನು ಬಳಸಿಕೊಂಡು, ನಿಗದಿಪಡಿಸಿರುವ ಜಾಗಕ್ಕಿಂತ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ 5 ಶಾಪ್ ಗಳನ್ನು ತೆರವುಗೊಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುಂದೆ ಬೀದಿ ಬದಿ ವ್ಯಾಪಾರಿಗಳಿಗೆ ನಿಗದಿಪಡಿಸಿರುವ ಜಾಗದಲ್ಲಿಯೇ ವ್ಯಾಪಾರ ಮಾಡಬೇಕು. ಅದನ್ನು ಹೊರತುಪಡಿಸಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಾರ್ಯಾಚರಣೆಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಪ್ರದೀಪ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳಾದ ಕೃಷ್ಣಕುಮಾರ್, ರಾಮೇಗೌಡ, ಮಾರ್ಷಲ್‌ಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...