ಕರಾವಳಿಯಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ

Date:

  • ಬಿರುಗಾಳಿಯು ಗಂಟೆಗೆ 45-65 ಕಿ.ಮೀ ವರೆಗೂ ಬೀಸುವ ಸಾಧ್ಯತೆ
  • ಕರಾವಳಿಯ ಶಾಲಾ-ಕಾಲೇಜುಗಳಿಗೆ ಜು.6ರಂದು ರಜೆ ಘೋಷಣೆ

ಜೂನ್‌ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಇದೀಗ ಜುಲೈನಲ್ಲಿ ಚುರುಕು ಪಡೆದುಕೊಂಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರಾವಳಿ ಭಾಗಗಳಲ್ಲಿ ಜೋರು ಮಳೆಯಾಗುತ್ತಿದ್ದು, ಜುಲೈ 8ರವರೆಗೆ ಮುಂದುವರೆಯಲಿದೆ. ಬಿರುಗಾಳಿಯು ಗಂಟೆಗೆ 45-65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡದಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’​ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ವಿಜಯನಗರ, ದಾವಣಗೆರೆ, ರಾಯಚೂರು, ಗದಗ ಹಾಗೂ ಧಾರವಾಡ ಒಟ್ಟು 5 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಮುಂದುವರೆದ ಶಾಲಾ ರಜೆ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಜು.6ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆಯಾಗಿದೆ?

ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಮಳೆಯಾಗಿದೆ.

ಧರ್ಮಸ್ಥಳ, ಪುತ್ತೂರು, ಗೋಕರ್ಣ, ನಿರ್ಣಾ, ಉಪ್ಪಿನಂಗಡಿ, ಬೇಲಿಕೇರಿ, ಕದ್ರಾ, ಕೊಟ್ಟಿಗೆಹಾರ, ಅಡಕಿ, ಭಾಗಮಂಡಲ, ಶೃಂಗೇರಿ ಸುಳ್ಯ, ಬೀದರ್, ದೇವದುರ್ಗ, ವಿರಾಜಪೇಟೆ, ಮಸ್ಕಿ, ರಾಯಚೂರು, ಹೊಸಕೋಟೆ, ಪಾವಗಡ, ಹಾರಂಗಿ, ಬಂಡೀಪುರ, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಹರಪನಹಳ್ಳಿಯಲ್ಲಿ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಹೆಬ್ಬಾಳ-ಶಿವಾಜಿನಗರ ಬಸ್‌ಗಳ ಸೇವೆ ಕೊಡಿಗೇಹಳ್ಳಿ ಗೇಟ್‌ವರೆಗೆ ವಿಸ್ತರಣೆ

ಬೆಂಗಳೂರಿಗೆ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಡಗು | ಧರೆಗುರುಳಿದ ಮರಗಳು

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸುಂಟಿಕೊಪ್ಪದ ಕೆದಕಲ್ ಗ್ರಾಮದ ಭದ್ರಕಾಳಿ ದೇಗುದ ಸಮೀಪ ಮಡಿಕೇರಿ-ಮೈಸೂರು ರಸ್ತೆಗೆ ಮರವೊಂದು ಉರುಳಿ ಬಿದ್ದಿದೆ. ಹೀಗಾಗಿ, ರಸ್ತೆಯ ಒಂದು ಕಡೆ ಮಾತ್ರ ವಾಹನಗಳು ಸಂಚಾರ ನಡೆಸುತ್ತಿವೆ.

ಬಿಟ್ಟುಬಿಡದೆ ಮಳೆ ಸುರಿಯುತ್ತಿರುವ ಕಾರಣ ಬಿದ್ದಿರುವ ಮರವನ್ನು ತೆರವು ಮಾಡಲು ಅಡ್ಡಿ ಉಂಟಾಗಿದೆ. ಸುಂಟಿಕೊಪ್ಪದ ಕಂಬಿಕಾಣೆಯ ಭೂದಾನ ಪೈಸಾರಿಯಲ್ಲಿ ಮನೆಗಳ ಮೇಲೆ ಮರ ಬಿದ್ದಿದ್ದು, ಕಂಬಗಳು ಧರೆಗುರುಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...