ಬಿಬಿಎಂಪಿ ಕಸದ ಲಾರಿ ಅವೈಜ್ಞಾನಿಕ ಪಾರ್ಕಿಂಗ್; ಬೈಕ್ ಸವಾರ ಸಾವು

Date:

ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಪಾರ್ಕ್ ಮಾಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಗೆ ಬೈಕ್‌ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಯನಗರ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ರಾತ್ರಿ 12ಕ್ಕೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಾಮನಗರ ಜಿಲ್ಲೆ ಕಲ್ಲಿಗೌಡನದೊಡ್ಡಿ ನಿವಾಸಿ ಜಯಲಿಂಗ(26) ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು, ಜೆ.ಪಿ.ನಗರ ಏಳನೇ ಹಂತದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಜಯನಗರ ಮೆಟ್ರೋ ನಿಲ್ದಾಣದ ಬಳಿ ಅವೈಜ್ಞಾನಿಕವಾಗಿ ಬಿಬಿಎಂಪಿ ಕಸದ ಲಾರಿಯನ್ನು ಪಾರ್ಕ್‌ ಮಾಡಲಾಗಿತ್ತು. ಜಯಲಿಂಗ ಅವರು ಬನಶಂಕರಿಯಿಂದ ಸೌತ್ ಎಂಡ್ ಸರ್ಕಲ್ ಮೂಲಕ ಬರುತ್ತಿದ್ದರು. ಈ ವೇಳೆ, ಬೈಕ್ ನಿಯಂತ್ರಣಕ್ಕೆ ಸಿಗದೆ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕ್ಕಿಯಾದ ರಭಸಕ್ಕೆ ಬೈಕ್‌ ಮತ್ತು ಮೃತದೇಹ ಲಾರಿಗೆ ಕೆಳಗೆ ಸಿಲುಕಿಕೊಂಡಿತ್ತು. ಪೊಲೀಸರು ಸತತವಾಗಿ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಮೃತದೇಹವನ್ನು ಹೊರ ತೆಗೆದಿದ್ದಾರೆ. ಜಯಲಿಂಗ ಅವರು ಹೆಂಡತಿ ಮತ್ತು 7 ತಿಂಗಳ ಮಗವನ್ನು ಅಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೌರ ಕಾರ್ಮಿಕ ದಿನಾಚರಣೆಯ ಜೊತೆಗೆ ತಾರತಮ್ಯ, ಅವಮಾನ, ಶೋಷಣೆಯೂ ಇದೆ…

ಸದ್ಯ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೆಟ್ರೋ ನಿಲ್ದಾಣದ ಕೆಳಗೆ ಬಿಬಿಎಂಪಿ ಕಸದ ಲಾರಿಯನ್ನು ಅವೈಜ್ಞಾನಿಕ ಪಾರ್ಕಿಂಗ್ ಮಾಡಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತವ್ಯಕ್ತಿ ಜಯಲಿಂಗ ಅವರು ಸಹ ವೇಗವಾಗಿ ಬೈಕ್ ಚಲಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...