ಅಸ್ಪೃಶ್ಯತೆ ಆಚರಣೆ ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತದೆ: ಹೈಕೋರ್ಟ್‌

Date:

ಆಧುನಿಕ ಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಅಸ್ಪೃಶ್ಯತೆ ಆಚರಣೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತವೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.

2016ರಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಿನಾಯಕ ನಗರದಲ್ಲಿ ದಲಿತ ಸಮುದಾಯದ ಸಾವಿತ್ರಮ್ಮ ಕುಟುಂಬಸ್ಥರು ಗಡಿಚೌಡೇಶ್ವರ ದೇವಾಯಲಕ್ಕೆ ತೆರಳಿದ್ದರು. ಈ ವೇಳೆ, ಅವರು ತಳ ಸಮುದಾಯದವರು ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಪ್ರವೇಶ ನಿಕಾರಿಸಲಾಗಿತ್ತು. ಪ್ರಶ್ನಿಸಿದ್ದಕ್ಕಾಗಿ ಸಾವಿತ್ರಮ್ಮ ಮತ್ತು ಕುಟುಂಬಸ್ಥರ ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿದ್ದರು.

ಅವರ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪಾಂಡುರಂಗ ಭಟ್‌, ಕುಮಾರಿ ಉಷಾ, ಕುಮಾರಿ ಶಾರದಾ, ವಿಲಾಸ್‌ ಲಾಡವ, ವೆಂಕಟನಾರಾಯಣ, ಚಿದಾನಂದ, ರವಿ ಮತ್ತು ಉಮಾ ಎಂಬವರು ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪಾಂಉರಂಗ ಭಟ್‌ ಮತ್ತು ಏಳು ಮಂದಿ ಆರೋಪಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

“ದೇವಾಲಯಗಳು ಏಕತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಪ್ರದೇಶಗಳಾಗಿವೆ. ಅಲ್ಲಿ, ಅಸ್ಪೃಶ್ಯತೆ ಆಚರಣೆ ಮಾಡುವುದು, ದಲಿತರಿಗೆ ಪ್ರವೇಶ ನಿರಾಕರಿಸುವುದು ಸಂವಿಧಾನಬಾಹಿರವಾಗಿದೆ. ಇಂತಹ ಬೆಳವಣಿಗೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸುತ್ತವೆ” ಎಂದು ಹೈಕೋರ್ಟ್‌ ಹೇಳಿದೆ.

“ಮನುಷ್ಯರು ಮನುಷ್ಯರಂತೆ ನಡೆದುಕೊಳ್ಳಬೇಕು. ತಾರತಮ್ಯಗಳು ಇಲ್ಲಬೇಕು” ಎಂದು ಹೈಕೋರ್ಟ್‌ ಒತ್ತಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...