ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಗೂ ಮುನ್ನ ಕಾಮಗಾರಿಯ ನೈಜತೆ ಪರಿಶೀಲನೆ : ಡಿಸಿಎಂ ಶಿವಕುಮಾರ್

Date:

2019-2020 ರಿಂದ 2022-2023ನೇ ಸಾಲಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳು, ಈಗ ನಡೆಯುತ್ತಿರುವ ಕಾಮಗಾರಿಗಳು, ಮುಗಿದಿರುವ ಕಾಮಗಾರಿಗಳು ಸೇರಿದಂತೆ ಪ್ರತಿಯೊಂದು ಕಾಮಗಾರಿಗಳ ನೈಜತೆ ಪರಿಶೀಲನೆಗಾಗಿ ಅಗತ್ಯ ಮಾಹಿತಿ ನೀಡುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

“ಕಾಮಗಾರಿಗಳ ಬಾಕಿ ಬಿಲ್ ಅನ್ನು ಗುತ್ತಿಗೆದಾರರಿಗೆ ಪಾವತಿಸಬೇಕಿದೆ. ಹಾಗಾಗಿ, ಕಾಮಗಾರಿಗಳ ನೈಜ್ಯತೆ ಪರಿಶೀಲನೆ ಮಾಡಬೇಕಿದೆ. ಪಾಲಿಕೆ ವತಿಯಿಂದ ನಾನಾ ಅನುದಾನದಡಿ ರಸ್ತೆ ಅಭಿವೃದ್ಧಿ, ರಾಜಕಾಲುವೆಗಳು, ಕೆರೆಗಳು, ಕಟ್ಟಡಗಳು ಸೇರಿದಂತೆ ವಾರ್ಡ್‌ ಮಟ್ಟದ ಕಾಮಗಾರಿಗಳ ಬಾಕಿ ಬಿಲ್‌ ಅನ್ನು ಪಾವತಿ ಮಾಡಬೇಕಿದೆ. ಹಾಲಿ ಕಾಮಗಾರಿಯ ವಸ್ತು ಸ್ಥಿತಿಯ ಛಾಯಾಚಿತ್ರ ಸೇರಿದಂತೆ ಕಾಮಗಾರಿಯ ಸಂಪೂರ್ಣ ವಿವರ ನೀಡಬೇಕು” ಎಂದು ಹೇಳಿದ್ದಾರೆ.

“ಈ ಕಾಮಗಾರಿ ನಡೆಸಲು ಅನುಮತಿ ನೀಡಿದವರು ಯಾರು? ಸ್ಥಳ ಪರಿಶೀಲನೆ ನಡೆಸಿ, ಅದರ ಅವಶ್ಯಕತೆ ಕುರಿತು ತಾಂತ್ರಿಕ ವರದಿ ನೀಡಿದ ದಿನಾಂಕ, ವರದಿ ತಯಾರಿಸಿದ ಎಂಜಿನಿಯರ್‌ ಹೆಸರು, ಹುದ್ದೆ, ಕಾಮಗಾರಿಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ ಯೋಜನಾ ಸಮಾಲೋಚಕ ಸಂಸ್ಥೆಯ ಹೆಸರು, ಟೆಂಡರ್‌ ಆಹ್ವಾನಿಸಿದ ದಿನಾಂಕ ಸೇರಿದಂತೆ ಸಂಪೂರ್ಣ ವರದಿಯನ್ನು ನೀಡುವಂತೆ” ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ನುಗ್ಗಿ ದರೋಡೆ ಮಾಡಿದ ದುಷ್ಕರ್ಮಿಗಳು

”ಕಾಮಗಾರಿಗಳ ಬಿಲ್‌ ಪಾವತಿ ಸಂದರ್ಭದಲ್ಲಿ ಕಾಮಗಾರಿಗಳಿಗೆ ಬಳಸಿದ ಸಾಮಗ್ರಿಗಳ ಗುಣಮಟ್ಟ, ಸ್ಥಳ ಪರಿಶೀಲನೆ ನಡೆಸಿ ನ್ಯೂನತೆಗಳನ್ನು ನಮೂದಿಸಿರುವುದು, ಅನುಪಾಲನಾ ವರದಿ, ಕಾಮಗಾರಿಯ ಗುಣಮಟ್ಟದ ಕುರಿತು ದೃಢೀಕರಿಸಿದ ಅಧಿಕಾರಿಗಳ ವಿವರ, ಪ್ರಯೋಗಾಲಯಗಳ ಪರೀಕ್ಷಾ ವರದಿ, ಬಿಲ್‌ ಪಾವತಿಯ ಮಾಹಿತಿಯನ್ನು ಒದಗಿಸಬೇಕು” ಎಂದು ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...