ಸಂಚಾರ ನಿಯಮ ಉಲ್ಲಂಘಣೆ | ಶೇ.50ರಷ್ಟು ರಿಯಾಯಿತಿ; ₹50.71 ಲಕ್ಷ ದಂಡ ಸಂಗ್ರಹ

Date:

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಎರಡು ದಿನದಲ್ಲಿ 15,980 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹50.71 ಲಕ್ಷ ದಂಡ ಸಂಗ್ರಹವಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ.50 ರಷ್ಟು ರಿಯಾಯಿತಿ ಘೋಷಿಸಿದ್ದರಿಂದ ಗುರುವಾರ ಹಾಗೂ ಶುಕ್ರವಾರ ರಿಯಾಯಿತಿ ಸೌಲಭ್ಯ ಪಡೆಯಲು ಆನ್‌ಲೈನ್‌ ಹಾಗೂ ಆಫ್‌ಲೈನ್‌ ಮೂಲಕ ವಾಹನ ಸವಾರರು ದಂಡ ಪಾವತಿ ಮಾಡುತ್ತಿದ್ದಾರೆ.

“ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದ ಮೊದಲ ದಿನ ಗುರುವಾರ ₹28.35 ಲಕ್ಷ ಹಾಗೂ ಎರಡನೇ ದಿನ ಶುಕ್ರವಾರ ₹22.36 ಲಕ್ಷ ಸಂಗ್ರಹವಾಗಿದೆ. ಸಂಚಾರ ನಿರ್ವಹಣೆ ಕೇಂದ್ರ(ಟಿಎಂಸಿ), ಸಂಚಾರ ಪೊಲೀಸ್‌ ಠಾಣೆಗಳು, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ಹಾಗೂ ಆನ್‌ಲೈನ್ ಮೂಲಕ ಜನರು ದಂಡ ಕಟ್ಟುತ್ತಿದ್ದಾರೆ” ಎಂದು ಪೊಲೀಸರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಲು ಆರಂಭಿಸಿದ ಬಿಎಂಟಿಸಿ

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಸೆಪ್ಟೆಂಬರ್ 9ರೊಳಗಾಗಿ ದಂಡ ಪಾವತಿಸಲು ಗಡುವು ನೀಡಲಾಗಿದೆ.  

ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆ, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...