‘ಮತದಾನ ಮಾಡಿ ಉಚಿತ ತಿಂಡಿ ತಿನ್ನಿ’: ಬಿಬಿಎಂಪಿ ನಿರ್ಬಂಧಕ್ಕೆ ಹೈಕೋರ್ಟ್‌ ತಡೆ

Date:

  • ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯ
  • ಬಿಬಿಎಂಪಿ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೈಕೋರ್ಟ್ ಮೊರೆ ಹೋಗಿದ್ದ ಹೋಟೆಲ್ ಮಾಲೀಕರು

ಬುಧವಾರ (ಮೇ 10) ರಾಜ್ಯದಲ್ಲಿ ವಿಧಾನಸಭಾ ಚುನಾವನೆಯ ಮತದಾನ ನಡೆಯುತ್ತಿದೆ. ಮತದಾನ ಮಾಡುವಂತೆ ಮತದಾರರನ್ನು ಉತ್ತೇಜಿಸಲು ಬೆಂಗಳೂರಿನ ಎರಡು ಪ್ರತಿಷ್ಠಿತ ಹೋಟೆಲ್‌ಗಳು ಮತದಾನ ಮಾಡಿದವರಿಗೆ ಉಚಿತ ತಿಂಡಿ ನೀಡುವುದಾಗಿ ಹೇಳಿದ್ದವು. ಇದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಬಂಧ ವಿಧಿಸಿತ್ತು. ಇದೀಗ ಈ ನಿರ್ಬಂಧಕ್ಕೆ ಹೈಕೋರ್ಟ್ ತಡೆ ನೀಡಿದೆ.

ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯಗಳನ್ನು ನೀಡುವುದಾಗಿ ನಗರದ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಮತ್ತು ಚಾಲುಕ್ಯ ಸಾಮ್ರಾಟ್ ಹೋಟೆಲ್​ಗಳು ಪ್ರಕಟಣೆ ನೀಡಿದ್ದವು.

ಉಚಿತ ಆಹಾರ ನೀಡುವುದಕ್ಕೆ ನಿರ್ಬಂಧ ಹೇರಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಹೋಟೆಲ್‌ಗಳು ಈ ರೀತಿ ಮತದಾನ ಮಾಡಿದವರಿಗೆ ಉಚಿತ ತಿಂಡಿ ನೀಡುವುದು ಸೇರಿದಂತೆ ಇಂತಹ ಪ್ರಚಾರಗಳಿಗೆ ನಾವು ಅನುಮತಿ ನೀಡುವುದಿಲ್ಲ. ಇಂತಹ ಉಚಿತ ನೀಡುವ ಭರವಸೆಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು. ಒಂದು ವೇಳೆ ಈ ರೀತಿಯ ಭಿತ್ತಿಪತ್ರಗಳು ಕಂಡುಬಂದರೆ ಅಥವಾ ಈ ರೀತಿಯ ಪ್ರಕಟಣೆಗಳಿಗೆ ಸಂಬಂಧಿಸಿದ ಹೋಟೆಲ್ ಮಾಲೀಕರನ್ನೇ ನೇರೆ ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿಯ ಈ ನಿರ್ಧಾರಕ್ಕೆ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಬಿಎಂಪಿ ಆದೇಶದ ವಿರುದ್ಧ ಹೋಟೆಲ್ ಮಾಲೀಕರ ಸಂಘ ಮಂಗಳವಾರ ಹೈಕೋರ್ಟ್ ಮೊರೆ ಹೋಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಟೆಲ್‌ಗಳಲ್ಲಿ ಉಚಿತ ತಿಂಡಿ ವಿತರಣೆ ; ತಡೆಹಿಡಿದ ಬಿಬಿಎಂಪಿ

ವಿಚಾರಣೆ ವೇಳೆ, “ಈ ಉಚಿತ ತಿಂಡಿ ನೀಡುವುದು ಮತದಾನ ಉತ್ತೇಜಿಸುವುದಕ್ಕಾಗಿ ಇದು ರಾಜಕೀಯ ಹೊರತಾದ ಕ್ರಮವಾಗಿದೆ. 2018ರಲ್ಲಿ ಬೆಂಗಳೂರಿನಲ್ಲಿ ಶೇ. 54.7ರಷ್ಟು ಮತದಾನವಾಗಿತ್ತು. 2018 ಮತ್ತು 2019 ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ಸಮಯದಲ್ಲಿಯೂ ಮತದಾನದ ಉತ್ತೇಜನಕ್ಕಾಗಿ ಈ ಉಚಿತಗಳನ್ನು ನೀಡಿದ್ದೇವೆ. 2018ರಲ್ಲಿ ಸುಮಾರು 3,900 ಮತದಾರರ ಗ್ರಾಹಕರು ನಮ್ಮ ಕೊಡುಗೆಯನ್ನು ಪಡೆದುಕೊಂಡಿದ್ದಾರೆ. 2019 ರಲ್ಲಿ ಈ ಸಂಖ್ಯೆ 5,100 ಕ್ಕೆ ಏರಿದೆ. ಹಾಗಾಗಿ, ಈ ಬಾರಿಯೂ ಉಚಿತ ನೀಡಲು ನಿರ್ಧರಿಸಿದ್ದೇವೆ” ಎಂದು ಹೋಟೆಲ್‌ ಮಾಲೀಕ ಕೃಷ್ಣರಾಜ್ ಹೇಳಿದ್ದರು.

ಹೋಟೆಲ್ ಮಾಲೀಕರ ಸಂಘದ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌, ಬಿಬಿಎಂಪಿ ನಿರ್ಬಂಧಕ್ಕೆ ತಡೆಯೊಡ್ಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...