ಬೆಂಗಳೂರಿನಲ್ಲಿ ನೀರಿನ ಸಮಸ್ಯೆ; ಇಂದು ಸಿಎಂ ಸಭೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಅಧಿಕವಾಗುತ್ತಿದ್ದು, ಜನರು ನೀರಿಗೆ ಪರದಾಡುವಂತಾಗಿದೆ. ಹಣವಿದ್ದರೂ ಟ್ಯಾಂಕರ್‌ ನೀರನ್ನು ತರಿಸುತ್ತಿದ್ದಂತೆ ಬಡವರು ಪಾಲಿಕೆ ಕಳುಹಿಸುವ ನೀರಿಗೆ ಕಾಯುತ್ತಿದ್ದಾರೆ. ಈ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ (ಮಾರ್ಚ್ 18) ಉನ್ನತ ಮಟ್ಟದ ಸಭೆ ನಡೆಯಲಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ಕಾಡುತ್ತಿರುವ ನೀರಿನ ಸಮಸ್ಯೆಯು ಮನೆಗಳು ಮಾತ್ರವಲ್ಲದೆ ಕಚೇರಿಗಳಿಗೂ ತಲುಪಿದೆ. ಸರಿಯಾದ ಯೋಜನೆಯನ್ನು ರೂಪಿಸದೆಯೇ ನಗರದ ಅಭಿವೃದ್ಧಿಯನ್ನು ಶೀಘ್ರವಾಗಿ ಮಾಡಿರುವುದೇ ಈ ನೀರಿನ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಹೇಳುತ್ತಾರೆ. ಸಂಸ್ಥೆಗಳು ಈಗ ವರ್ಕ್ ಫ್ರಮ್ ಹೋಮ್ ನೀಡಲು ಆರಂಭಿಸಿದೆ.

ಇದನ್ನು ಓದಿದ್ದೀರಾ?   WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಚೇರಿಯಲ್ಲಿ ನೀರಿನ ಸಮಸ್ಯೆ ಇರುವ ಕಾರಣದಿಂದಾಗಿ ಕಂಪನಿಗಳು ಈಗ ನೀರಿನ ಸಮಸ್ಯೆ ಇರುವ ಕಾರಣ ವರ್ಕ್ ಫ್ರಮ್ ಹೋಮ್ ನೀಡಲು ಆರಂಭಿಸಿದೆ. ಇದು ನಮ್ಮ ಕಾರ್ಯ ಚಟುವಟಿಕೆಯ ಮೇಲೆ ಪ್ರಭಾವ ಬೀರಿದೆ. ಆರಂಭದಲ್ಲಿ ಟ್ಯಾಂಕರ್‌ಗಳು 2500 ರೂಪಾಯಿಗೆ ನೀರು ಸರಬರಾಜು ಮಾಡುತ್ತಿತ್ತು. ಆದರೆ ಈಗ ಐದು ಸಾವಿರ ರೂಪಾಯಿ ಆಗಿದೆ” ಎಂದು ಕೂಕೂ ಎಫ್‌ಎಂ ಸಿಇಒ, ಸಹ ಸಂಸ್ಥಾಪಕ ಲಾಕ್‌ ಚಂದ್ ಬಿಸು ಹೇಳಿದರು.

ಇನ್ನೊಂದೆಡೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯುತ್ತಿದ್ದು, ಶಾಲೆಗಳಲ್ಲೂ ನೀರಿನ ಸಮಸ್ಯೆ ಉಂಟಾಗಿದೆ. ಪರೀಕ್ಷೆ ಮುಗಿಯುವವರೆಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಬೆಂಗಳೂರು ಜಲಮಂಡಳಿಗೆ ಖಾಸಗಿ ಶಾಲೆಗಳ ಒಕ್ಕೂಟವು ಮನವಿ ಮಾಡಿದೆ. ಈ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ ಬರೆದಿದೆ.

ಈ ನಡುವೆ ನಗರದಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಳ್ಳಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾದ್ ಮನೋಹರ್‌ ಅವರು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...