ಬೇಸಿಗೆಯ ಬೇಗೆಯ ನಡುವೆ ಬೆಂಗಳೂರಿನಲ್ಲಿ ನೀರಿನ ಕೊರತೆ!

Date:

  • ಸಾರ್ವಜನಿಕರಿಗೆ ನೀರಿನ ಕೊರತೆ ಮತ್ತು ಸರಬರಾಜಿನ ಬಗ್ಗೆ ಮಾಹಿತಿ ನೀಡಬೇಕು
  • ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡುತ್ತಿರುವ ಅಧಿಕಾರಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗಿದ್ದು, ಜತೆಗೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ನಗರದ ಕೆಲವು ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ದೂರುಗಳು ದಾಖಲಾಗುತ್ತಿವೆ.

ವಿದ್ಯಾಮಾನ್ಯನಗರ, ಆಂದ್ರಹಳ್ಳಿ, ಕಮ್ಮನಹಳ್ಳಿ ಮುಂತಾದ ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಅದರಲ್ಲಿಯೂ ಬಾಣಸವಾಡಿಯ ಒಎಂಬಿಆರ್‌ ಲೇಔಟ್‌ ನಿವಾಸಿಗಳು ಒಂದು ತಿಂಗಳಿನಿಂದ ನಿತ್ಯ ನೀರಿನ ಕೊರತೆಯಿಂದ ಪರದಾಡುತ್ತಿದ್ದಾರೆ.

“ಈ ಹಿಂದೆ ನಮ್ಮ ಏರಿಯಾದಲ್ಲಿ ವಾರಕ್ಕೆ ಮೂರು ಬಾರಿ ನೀರು ಬರುತ್ತಿತ್ತು. ಕಳೆದ ಒಂದು ತಿಂಗಳಿನಿಂದ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಸತತ 10 ದಿನಗಳಿಂದ ಒಎಂಬಿಆರ್ ಲೇಔಟ್‌ಗೆ ನೀರು ಬಿಟ್ಟಿಲ್ಲ. ಈ ಪ್ರದೇಶದಲ್ಲಿ ಶೂನ್ಯ ನೀರಿನ ಪೂರೈಕೆಯನ್ನು ಹೊಂದಿದ್ದೇವೆ. ಕೆಲವೊಮ್ಮೆ ನೀರನ್ನು ಕಡಿಮೆ ಅವಧಿಗೆ ಮತ್ತು ಕಡಿಮೆ ಒತ್ತಡದಲ್ಲಿ ಸರಬರಾಜು ಮಾಡಲಾಗುತ್ತದೆ” ಎಂದು ಒಎಂಬಿಆರ್ ಲೇಔಟ್ ನಿವಾಸಿ ಬೋಬಿ ಜೋಸೆಫ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರು ಮೂಲಭೂತ ಅವಶ್ಯಕತೆಯಾಗಿದೆ. ನೀರು ಸರಬರಾಜು ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪ್ರತಿ ಬಾರಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್‌ಬಿ) ಅಧಿಕಾರಿಗಳಿಗೆ ದೂರು ನೀಡಿದಾಗ, ಅವರು ನಮಗೆ ಕೆಲಸಗಾರರು ರಜೆಯಲ್ಲಿದ್ದಾರೆ ಎಂಬ ಸಣ್ಣ ಕಾರಣಗಳನ್ನು ನೀಡುತ್ತಾರೆ. ನೀರಿನ ಕೊರತೆ ಇದೆಯೇ ಎಂಬುದು ನಮಗೂ ಗೊತ್ತಿಲ್ಲ. ಈ ಬಗ್ಗೆ ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡುವೆ” ಎಂದರು.

“ನೀರಿನ ಸರಬರಾಜಿನಲ್ಲಿ ಏಕೆ ತೊಂದರೆ ಉಂಟಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬಹುಶಃ ನೀರಿನ ಬೇಡಿಕೆ ಹೆಚ್ಚಿರಬಹುದು. ಆದರೆ, ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು” ಎಂದು ವಿದ್ಯಾಮಾನ್ಯ ನಗರದ ನಿವಾಸಿಯೊಬ್ಬರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

“ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಗಳು ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡಲು ಕೆಲಸ ಮಾಡುತ್ತಿದ್ದಾರೆ” ಎಂದು ಕೆಲವು ನಿವಾಸಿಗಳು ದೂರಿದ್ದಾರೆ.

ಈ ಬಗ್ಗೆ ಮಾತನಾಡಿದ ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಯೊಬ್ಬರು, “ತಾಂತ್ರಿಕ ಅಡಚಣೆ ಮತ್ತು ವಿದ್ಯುತ್ ಅಡೆತಡೆಗಳಂತಹ ಸಮಸ್ಯೆ ನೀರಿನ ಕೊರತೆಗೆ ಕಾರಣವಾಗಿದೆ” ಎಂದರು.

“ಬೆಂಗಳೂರಿನ ಪೂರ್ವ ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ. ಬೇಸಿಗೆಯಲ್ಲಿ ನೀರಿನ ಬೇಡಿಕೆ ಹೆಚ್ಚಾಗುತ್ತದೆ. ವಿದ್ಯುತ್ ವ್ಯತ್ಯಯದಿಂದ ನಿರಂತರ ನೀರು ಪೂರೈಕೆಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ” ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಮುಖ್ಯ ಎಂಜಿನಿಯರ್ ಸುರೇಶ್ ಬಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...