ಮೋದಿ ರೋಡ್‌ ಶೋ ವೇಳೆ ಸಾರ್ವಜನಿಕರು ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ನೋಡುವುದನ್ನು ನಿಷೇಧಿಸಲಾಗಿದೆ

Date:

  • ರ‍್ಯಾಲಿಯನ್ನು ವೀಕ್ಷಿಸಲು ನಿಗದಿ ಮಾಡಿದ ಸ್ಥಳಕ್ಕೆ ಬನ್ನಿ
  • ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ರಾಜ್ಯದ ತುಂಬಾ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರಧಾನಿಗಳ ಭದ್ರತೆ ದೃಷ್ಟಿಯಿಂದ ನಗರದ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಕೆಲವು ಸೂಚನೆಗಳನ್ನು ಜಾರಿಗೆ ತಂದಿದ್ದಾರೆ.

ಮೇ 6 ಮತ್ತು 7ರಂದು ರೋಡ್‌ ಶೋ ನಡೆಯಲಿದೆ. ಈ ವೇಳೆ, ಸುರಕ್ಷತಾ ಮತ್ತು ಶಿಷ್ಟಾಚಾರ ಪಾಲನೆಗಾಗಿ ಮೇ 4ರಂದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸೂಚನೆಗಳನ್ನು ಬಿಡುಗಡೆ ಮಾಡಿದ್ದು, ಅವು ಇಂತಿವೆ.

  1. ಪ್ರಧಾನಿ ಮೋದಿ ರೋಡ್‌ ಶೋ ನಡೆಯುವ ವೇಳೆ ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ರ‍್ಯಾಲಿಯನ್ನು ವೀಕ್ಷಿಸುವುದು ನಿಷೇಧಿಸಲಾಗಿದೆ.
  2. ಮೋದಿ ರೋಡ್‌ ಶೋ ಪೂರ್ಣಗೊಳ್ಳುವವರೆಗೂ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹಾಗಾಗಿ ಪರ್ಯಾಯ ಮಾರ್ಗ ಬಳಸಲು ಪೊಲೀಸ್‌ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.
  3. ಕಟ್ಟಡದ ಪ್ರವೇಶ ಮತ್ತು ನಿರ್ಗಮನಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು. ಕಟ್ಟಡದ ಆವರಣದಲ್ಲಿ ಅನಧಿಕೃತ ವ್ಯಕ್ತಿಗಳನ್ನು ಅನುಮತಿಸಬಾರದು.
  4. ರ‍್ಯಾಲಿಯನ್ನು ವೀಕ್ಷಿಸಲು ಬಯಸುವವರು ಗೊತ್ತು ಮಾಡಿದ ನಿಗದಿತ ಸ್ಥಳಕ್ಕೆ ಬರಬೇಕು.
  5. ಯಾವುದೇ ಹೆಚ್ಚಿನ ಸೂಚನೆಗಳಿಗಾಗಿ ಪೊಲೀಸ್/ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಲು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ಪುಟ್ಟೆನಹಳ್ಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬರುತ್ತಿರುವ ಹಿನ್ನೆಲೆ, ಸುರಕ್ಷತಾ ಕ್ರಮ ಕೈಗೊಂಡಿದ್ದೇವೆ. ಮೇ 6ರಂದು ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಧಾನಿ ಅವರು ಬರಲಿದ್ದಾರೆ. ಅವರ ಭದ್ರತೆ ದೃಷ್ಟಿಯಿಂದ ಕೆಲವು ಸೂಚನೆಗಳನ್ನು ಬಿಡುಗಡೆ ಮಾಡಿದ್ದೇವೆ” ಎಂದು ಈ ದಿನ.ಕಾಮ್‌ಗೆ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...