ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಎಎಪಿ ಅಭಿಯಾನ

Date:

ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್‌ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

“ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಆದರೂ, ಕ್ಯಾಂಪಸ್ ಸೆಲೆಕ್ಷನ್‌ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ” ಎಂದು ಎಎಪಿ ಹೇಳಿದೆ.

“ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್‌ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು” ಎಂದು ಪಕ್ಷ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಡಿ.1 ರಿಂದ ಬೆಂಗಳೂರು – ನೀಲಕ್ಕಲ್‌ಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸಂಚಾರ

“ಡಿಸೆಂಬರ್ 1ರಿಂದ 4ರವರೆಗೆ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ” ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಹೇಳಿದ್ದಾರೆ.

“ಉಳಿದಂತೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...