ಸಹಾಯವಾಣಿ ಹೆಸರಿನಲ್ಲಿ ಬಂದ ಕರೆ ಸ್ವೀಕರಿಸಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

Date:

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್‌ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿದ್ದಾರೆ. ಮಹಿಳೆಯ ಕರೆ ಸ್ವೀಕರಿಸಿದಾಗ, ‘ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ವರ್ಗಾವಣೆ ಆಗುತ್ತಿದೆ. ನೀವೇ ಹಣ ವರ್ಗಾವಣೆ ಮಾಡುತ್ತಿದ್ದರೆ 3ನ್ನು ಒತ್ತಿ, ಇಲ್ಲವಾಗಿದ್ದರೆ, 1ನ್ನು ಒತ್ತಿ’ ಎಂದು ವಂಚಕರು ಹೇಳಿದ್ದಾರೆ.

ತಾವು ಹಣ ವರ್ಗಾವಣೆ ಮಾಡುತ್ತಿಲ್ಲವೆಂದ ಮಹಿಳೆಯು ವಂಚಕರು ಹೇಳಿದಂತೆ 1ನ್ನು ಒತ್ತಿದ್ದಾರೆ. ಕೂಡಲೇ ಅವರ ಖಾತೆಯಿಂದ 2 ಲಕ್ಷ ರೂ. ವರ್ಗಾವಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣ ಕಡಿತಗೊಂಡ ಮೆಸೇಜ್ ಸ್ವೀಕರಿಸಿದ ಮಹಿಳೆ, ತಕ್ಷಣವೇ ಬ್ಯಾಂಕ್‌ಗೆ ಹೋಗಿ ವಿಚಾರಿಸಿದ್ದಾರೆ. ಹಣ ಕಡಿತಗೊಂಡಿರುವುದನ್ನು ಬ್ಯಾಂಕ್‌ ಅಧಿಕಾರಿಗಳು ದೃಢಪಡಿಸಿದ್ದಾರೆ.

ನಂತರ, ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಮಹಿಳೆ ದೂರು ನೀಡಿದ್ದಾರೆ. ಬಳಿಕ, ಗಿರಿನಗರ ಪೊಲೀಸ್ ಠಾಣೆಗೆ ತೆರಳಿ, ಲಿಖಿತ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...