ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ: ಮೂಕರಂತೆ ನಿಂತಿದ್ದ ಜನರಿಗೆ ದಂಡ ವಿಧಿಸಲು ಹೈಕೋರ್ಟ್ ತಾಕೀತು

Date:

ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, ‘ಇದು ದುಶ್ಯಾಸನರ ರಾಜ್ಯ’ ಎಂದು ಕಿಡಿಕಾರಿದ್ದ ಹೈಕೋರ್ಟ್‌, ಈಗ “ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿದ್ದಾಗ ಆಕೆಯ ನೆರವಿಗೆ ಧಾವಿಸದೆ, ಮೂಕಪ್ರೇಕ್ಷಕರಂತೆ ನಿಂತಿದ್ದ ಗ್ರಾಮದ ಜನರಿಂದ ದಂಡ ಸಂಗ್ರಹಿಸಬೇಕು. ಆ ಮೊತ್ತವನ್ನು ಸಂತ್ರಸ್ತೆಗೆ ನೀಡಬೇಕು” ಎಂದು ತಾಕೀತು ಮಾಡಿದೆ.

ಗ್ರಾಮದ ಯುವಕ-ಯುವತಿ ಪರಸ್ಪರ ಪ್ರೀತಿಸಿದ್ದರು. ಡಿಸೆಂಬರ್ 10ರ ರಾತ್ರಿ ಊರು ಬಿಟ್ಟು ಹೋಗಿದ್ದರು. ಇದರಿಂದ ವಿಚಲಿತಗೊಂಡಿದ್ದ ಯುವತಿಯ ಕುಟುಂಬಸ್ಥರು ಅಂದು ರಾತ್ರಿ ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ಎಳೆದೊಯ್ದು, ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದರು.

ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪ್ರಸನ್ನ ಬಿ ವರಾಳೆ ಮತ್ತು ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ಘಟನೆಯ ವೇಳೆ ಮಹಿಳೆಯ ನೆರವಿಗೆ ಬಾರದ ಜನರ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ವೇಳೆ ಮೂಕರಂತೆ ನಿಂತಿದ್ದ ವರ್ತನೆಗೆ ಬ್ರಿಟಿಷರು ಪುಂಡಕಂದಾಯ ಎಂಬ ಹೆಸರಿನಲ್ಲಿ ತೆರಿಗೆ ವಿಧಿಸುತ್ತಿದ್ದರು. ವಿಲಿಯಮ್ ಬೆಂಟಿಂಕ್‌ ವೈಸ್‌ರಾಯ್ ಆಗಿದ್ದಾಗ ಅಂತಹ ತೆರಿಗೆ ಇತ್ತು. ಈ ಘಟನೆಯಲ್ಲಿ ಮೂಕರಂತೆ ನೋಡುತ್ತ ನಿಂತಿದ್ದ ಗ್ರಾಮದ ಜನರಿಂದ ದಂಡ ಸಂಗ್ರಹಿಸಿ, ಸಂತ್ರಸ್ತೆಗೆ ನೀಡಬೇಕು” ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಶನಿವಾರ ಆದೇಶ ಹೊರಡಿಸಿದೆ. ಸಿಐಡಿ ತಂಡ ಸೋಮವಾರ ಬೆಳಗಾವಿಗೆ ತೆರಳಿದ್ದು, ತನಿಖೆ ಆರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...