ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್ 1 ಸ್ಥಾನದಲ್ಲಿದೆ. ಮಹಿಳೆಯರು ವಾಸಿಸಲು ಬೆಂಗಳೂರು ಅತೀ ಹೆಚ್ಚು ಸುರಕ್ಷಿತ ನಗರವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಇತ್ತೀಚೆಗೆ ಚೆನ್ನೈ ಮೂಲದ ‘ಅವತಾರ್ ಗ್ರೂಪ್’ ಸಂಸ್ಥೆಯು ವರದಿ ಪ್ರಕಟಿಸಿದೆ. ಸುರಕ್ಷತೆ, ತಂತಜ್ಞಾನ, ಮೂಲಸೌಕರ್ಯ ಸೇರಿದಂತೆ ಕೆಲವು ಮಾನದಂಡಗಳಲ್ಲಿ ಬೆಂಗಳೂರು 53.29 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಭಾರತದಲ್ಲಿಯೇ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. ಇದಕ್ಕೆ ಕಾರಣಿಭೂತರಾದ ಎಲ್ಲರಿಗೂ ಅಭಿನಂದನೆಗಳು” ಎಂದಿದ್ದಾರೆ.
“ವಿರೋಧ ಪಕ್ಷದವರು ದಿನನಿತ್ಯ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಾರೆ. ಈ ವರದಿಯು ಅವರಿಗೆ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ.




