ಯುವತಿಗೆ ಅಶ್ಲೀಲ ಸಂದೇಶ: ರೇಣುಕಾಸ್ವಾಮಿ ಪ್ರಕರಣ ಉಲ್ಲೇಖಿಸಿ ಯುವಕನಿಗೆ ಥಳಿಸಿದ ಪುಂಡರು

Date:

ಯುವತಿಗೆ ಅಶ್ಲೀಲ ಸಂದೇಶ ಕಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ಮೇಲೆ ಪುಂಡರ ಗುಂಪು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಸ್ನೇಹಿತರಾಗಿದ್ದು, ನಂತರ ಪರಸ್ಪರ ದೂರವಾಗಿದ್ದರು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸದ ಕುಶಾಲ್ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ನಂತರದಲ್ಲಿ ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್​ನ​ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಇದೂ ಆಗುತ್ತದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...