ಕೆಪಿಎಸ್‌ಸಿ | ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್‌ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯನ್ನು ನಡೆಸಿತ್ತು. ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯ ಕನ್ನಡ ಭಾಷಾಂತರವು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಬೆನ್ನಲ್ಲೇ ಸಿಎಂ ಮರು ಪರೀಕ್ಷೆ ನಡೆಸಲು ಸಿಎಂ ಆದೇಶಿಸಿದ್ದಾರೆ.

“ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

“ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದ ವಿಚಾರವು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಯಲ್ಲಿ ಇದ್ದ ತಪ್ಪುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಗೂಗಲ್ ಅನುವಾದ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಮರು ಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...