ಮನಿ ಲಾಂಡರಿಂಗ್ | ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಬಂಧನ

Date:

ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇಡಿ ಅಮಾನತುಲ್ಲಾ ಖಾನ್ ಅವರ ಮನೆಗೆ ಇಂದು ಮುಂಜಾನೆ 6 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದೆ.

“ನನ್ನ ಬಂಧನ ಮಾಡುವ ಉದ್ದೇಶದಿಂದಲೇ ನನ್ನ ನಿವಾಸದ ಮೇಲೆ ದಾಳಿ ಮಾಡಲಾಗಿದೆ” ಎಂದು ಅಮಾನತುಲ್ಲಾ ಖಾನ್ ದಾಳಿ ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಮನೆಗೆ ಇಡಿ ದಾಳಿಯಾಗುತ್ತಿದ್ದಂತೆ ಹೇಳಿಕೆ ನೀಡಿದ್ದ ಎಎಪಿ ಶಾಸಕ ಅಮಾನತುಲ್ಲಾ ಖಾನ್, “ವಾರಂಟ್‌ನೊಂದಿಗೆ ಇಡಿ ನನ್ನ ನಿವಾಸಕ್ಕೆ ಬಂದಿದೆ. ಇದು 2016ರ ಪ್ರಕರಣವಾಗಿದ್ದು, ಪ್ರಸ್ತುತ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನನ್ನನ್ನು 2022ರಲ್ಲಿ ಎಸಿಪಿ ಬಂಧಿಸಿದ್ದರು. ಆದರೆ 10 ದಿನಗಳಲ್ಲಿ ಜಾಮೀನು ಸಿಕ್ಕಿತ್ತು” ಎಂದಿದ್ದಾರೆ.

“ಕಳೆದ ವರ್ಷ ಅಕ್ಟೋಬರ್ 10ರಂದು ಇಡಿ ನನ್ನ ಸ್ಥಳದಲ್ಲಿ ಹುಡುಕಾಟ ನಡೆಸಿತ್ತು. ಆದರೆ ಈಗ ಮತ್ತೆ ಯಾಕೆ ಬಂದಿದ್ದಾರೆ ಎಂದು ನಾನು ಕೇಳಲು ಬಯಸುತ್ತೇನೆ. ಅವರು ಇನ್ನೇನು ಹುಡುಕಲು ಬಯಸುತ್ತಾರೆ? ಇಲ್ಲಿಯವರೆಗೆ ಯಾವುದೂ ಸಾಬೀತಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ದೆಹಲಿ ವಕ್ಫ್ ಬೋರ್ಡ್ ಪ್ರಕರಣದಲ್ಲಿ ನೇಮಕಾತಿ ಮತ್ತು ಅದರ ಆಸ್ತಿಗಳನ್ನು ಗುತ್ತಿಗೆಗೆ ನೀಡಿದ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಖಾನ್ ಹಾಜರಾಗುತ್ತಿಲ್ಲ ಎಂದು ಇತ್ತೀಚೆಗೆ ಖಾನ್ ದೂರು ಸಲ್ಲಿಸಿದ್ದರು. ಖಾನ್ ವಿಚಾರಣೆಗೆ ಹಾಜರಾಗದ ಕಾರಣ ಈ ತನಿಖೆಯನ್ನು ಮುಕ್ತಾಯಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಇಡಿ ಹೇಳಿದೆ.

ದೆಹಲಿ ವಕ್ಫ್ ಬೋರ್ಡ್ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳು ಮತ್ತು ಒಂದು ಸಂಸ್ಥೆಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಖಾನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಗುತ್ತಿಗೆ ನೀಡಿದ ಆರೋಪ ಇದಾಗಿದೆ. ದೆಹಲಿ ವಕ್ಫ್ ಮಂಡಳಿಗೆ ನಿಯಮಗಳನ್ನು ಉಲ್ಲಂಘಿಸಿ 32 ಗುತ್ತಿಗೆ ನೌಕರರನ್ನು ನೇಮಿಸಲಾಗಿದೆ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...