ಚುನಾವಣಾ ಬಾಂಡ್‌ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

Date:

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ಯ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಅಪರಾಧಕ್ಕಾಗಿ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆಗೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಕ್ರಮ ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಎಚ್‌ಡಿಕೆ

42ನೇ ಎಸಿಎಂಎಂ ನ್ಯಾಯಾಲಯಕ್ಕೆ ಜನಾಧಿಕಾರ ಸಂಘರ್ಷ ಪರಿಷತ್ ಸಲ್ಲಿಸಿದ್ದ ದೂರಿನಲ್ಲಿ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ನಾಯಕರು, ಆಗಿನ ಬಿಜೆಪಿ ಕರ್ನಾಟಕ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ, ಬಿಜೆಪಿ ಕರ್ನಾಟಕ ಇವರ ಮೇಲೆ ದೂರು ನೀಡಿದ್ದರು.

ಈ ದೂರನ್ನು ಪರಿಗಣಿಸಿರುವ ನ್ಯಾಯಾಲಯವು ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...