ಗೋವಾ | ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ: 23 ಜನ ಸಜೀವ ದಹನ, ಪ್ರಧಾನಿ ಅವರಿಂದ ಸಂತಾಪ ಸೂಚನೆ

Date:

ಪಣಜಿ: ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ‘ಫೇಮಸ್‌ ನೈಟ್‌ ಕ್ಲಬ್‌ ಬಿರ್ಚ್‌’ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 23 ಜನ ಸಜೀವ ದಹನವಾಗಿದ್ದಾರೆ.

ಸುಮಾರು 50 ಮಂದಿ ಗಾಯಗೊಂಡಿದ್ದು, ಅವರನ್ನು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ವಿವರ: ಈ ದುರಂತವು ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಸಂಭವಿಸಿದೆ. ಕ್ಲಬ್ ಮುಚ್ಚುವ ಸಿದ್ಧತೆ ನಡೆಯುತ್ತಿದ್ದಾಗ ಈ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅಡುಗೆ ಮನೆಯ ಬಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿರುವುದೇ ಬೆಂಕಿ ಕಾಣಿಸಿಕೊಳ್ಳಲು ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಒಳಗೆ ಸಿಲುಕಿದ್ದವರಿಗೆ ಸಮಯಾವಕಾಶ ಸಿಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದಲ್ಲಿ ಮೃತಪಟ್ಟ 23 ಜನರಲ್ಲಿ 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು. ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ಮಾಹಿತಿ ತಿಳಿದುಬಂದಿದೆ. ಆದಾಗ್ಯೂ, ಮೃತಪಟ್ಟವರು ಸ್ಥಳೀಯರೋ ಅಥವಾ ಬೇರೆ ರಾಜ್ಯದವರೋ ಎಂಬ ಬಗ್ಗೆ ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ, ಮತ್ತು ಅವರ ಗುರುತು ಪತ್ತೆ ಕಾರ್ಯ ಮುಂದುವರೆದಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಮುಖ್ಯಮಂತ್ರಿಗಳೊಂದಿಗೆ ಮಾಹಿತಿ ಪಡೆದು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿಗಳು ಘೋಷಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...