ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ ಇಸ್ರೇಲ್‌ನಿಂದ ಭೀಕರ ಬಾಂಬ್ ದಾಳಿ

Date:

ದಕ್ಷಿಣ ಸಿರಿಯಾದ ಡ್ರೂಝ್ ಬಹುಸಂಖ್ಯಾತ ನಗರವಾದ ಸ್ವೀಡಾದಲ್ಲಿ ಸರ್ಕಾರಿ ಪಡೆಗಳು ಮತ್ತು ಸ್ಥಳೀಯ ಡ್ರೂಝ್ ಬಣಗಳ ನಡುವಿನ ಕದನ ವಿರಾಮ ಮುರಿದು ಬಿದ್ದ ಬೆನ್ನಲ್ಲೇ, ಇಸ್ರೇಲ್ ಸೇನೆಯು ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ.

ಸಿರಿಯಾ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಸೇನಾ ಪ್ರಧಾನ ಕಚೇರಿಯ ಪ್ರವೇಶದ್ವಾರವನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಈ ದಾಳಿ ನಡೆಸಿದೆ. ಈ ದಾಳಿಯಲ್ಲಿ ದೇಶದ ರಕ್ಷಣಾ ಸಚಿವಾಲಯದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸಿರಿಯಾದ ಭದ್ರತಾ ಅಧಿಕಾರಿಗಳು ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ಸಿರಿಯಾದ ಡಮಾಸ್ಕಸ್ ಪ್ರದೇಶದಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ್ದೇವೆ. ದಕ್ಷಿಣ ಸಿರಿಯಾದಲ್ಲಿ ಡ್ರೂಝ್ ನಾಗರಿಕರ ವಿರುದ್ಧ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಆಡಳಿತದ ಕ್ರಮಗಳನ್ನು ಐಡಿಎಫ್ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಪಡೆಗಳು ಮತ್ತು ಡ್ರೂಝ್‌ ಸಶಸ್ತ್ರ ಗುಂಪುಗಳ ನಡುವಿನ ಕದನ ವಿರಾಮ ಒಪ್ಪಂದ ಮುರಿದ ನಂತರ ದಕ್ಷಿಣ ಸಿರಿಯಾದ ಸ್ವೀಡಾ ನಗರದಲ್ಲಿ ಘರ್ಷಣೆಗಳು ತೀವ್ರಗೊಂಡಿವೆ. ಇದೀಗ ಡ್ರೂಝ್‌ ಅಲ್ಪಸಂಖ್ಯಾತರನ್ನು ಬೆಂಬಲಿಸಿ ಇಸ್ರೇಲ್ ರಂಗಕ್ಕಿಳಿದಿದ್ದಲ್ಲದೇ, ರಕ್ಷಣಾ ಸಚಿವಾಲಯದ ಕಚೇರಿಯ ಮೇಲೆ ಭೀಕರ ದಾಳಿ ನಡೆಸಿದೆ. ಬಾಂಬ್ ದಾಳಿ ದೃಶ್ಯಗಳನ್ನು ಅಲ್ ಜಝೀರಾ ಚಾನೆಲ್ ನೇರಪ್ರಸಾರದ ಮೂಲಕ ಬಿತ್ತರಿಸಿದೆ.

ಡ್ರೂಝ್ ಎನ್ನುವುದು 10ನೇ ಶತಮಾನದಲ್ಲಿ ಶಿಯಾ ಇಸ್ಲಾಂನಿಂದ ಹೊರಹೊಮ್ಮಿದ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯ. ವಿಶ್ವಾದ್ಯಂತ ಅಂದಾಜು ಒಂದು ಮಿಲಿಯನ್ ಡ್ರೂಝ್‌ಗಳಲ್ಲಿ, ಅರ್ಧಕ್ಕಿಂತ ಹೆಚ್ಚು ಜನರು ಸಿರಿಯಾದಲ್ಲಿ ವಾಸಿಸುತ್ತಿದ್ದಾರೆ. ಲೆಬನಾನ್ ಮತ್ತು ಇಸ್ರೇಲ್‌ನಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮುದಾಯದ ಜನರಿದ್ದಾರೆ.

ಈ ವಾರದ ಆರಂಭದಲ್ಲಿ ಸಿರಿಯಾ ಸರ್ಕಾರವು ಸ್ಥಳೀಯ ಡ್ರೂಝ್‌ ಹೋರಾಟಗಾರರ ವಶದಲ್ಲಿರುವ ಪ್ರದೇಶಗಳ ಮೇಲೆ ಹಿಡಿತ ಸಾಧಿಸಲು ಸ್ವೀಡಾದಲ್ಲಿ ಪಡೆಗಳನ್ನು ನಿಯೋಜಿಸಿತ್ತು. ಜು. 13ರಂದು ಡ್ರೂಝ್‌ ಗುಂಪುಗಳು ಮತ್ತು ಸುನ್ನಿ ಮುಸ್ಲಿಂ ಬೆಡೋಯಿನ್ ಬುಡಕಟ್ಟು ಜನಾಂಗದ ನಡುವೆ ಭೀಕರ ಸಂಘರ್ಷ ನಡೆದು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸಿರಿಯನ್ ಪಡೆಗಳನ್ನು ಆ ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ಸರ್ಕಾರದ ಹೇಳಿದೆ. ಈ ನಡುವೆ ಕದನ ವಿರಾಮದ ಮಾತುಕತೆಗಳು ಕೂಡ ನಡೆದಿತ್ತು. ಕದನ ವಿರಾಮ ಒಪ್ಪಂದ ಮುರಿದ ಬೆನ್ನಲ್ಲೇ ಡ್ರೂಝ್‌ ಅಲ್ಪಸಂಖ್ಯಾತರನ್ನು ಬೆಂಬಲಿಸಿ ಇಸ್ರೇಲ್ ಈ ದಾಳಿ ನಡೆಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಈ ದಾಳಿಗಳನ್ನು ಸಿರಿಯಾದ ಸಾರ್ವಭೌಮತ್ವದ ಉಲ್ಲಂಘನೆ ಎಂದು ಟರ್ಕಿ, ಕತಾರ್, ಮತ್ತು ಇತರ ಅರಬ್ ರಾಷ್ಟ್ರಗಳು ಖಂಡಿಸಿವೆ. ಆದರೆ, ಇಸ್ರೇಲ್ ತನ್ನ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಭದ್ರತೆಗಾಗಿ ಅಗತ್ಯ ಎಂದು ಸಮರ್ಥಿಸಿಕೊಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...