ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

Date:

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.

ಆಗಸ್ಟ್ 31ರಂದು ದೀರ್ಘ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2 ಮಧ್ಯಾಹ್ನ 2:30ಕ್ಕೆ ಮುಂದೂಡಿಕೆ ಮಾಡಿದೆ. ಜೊತೆಗೆ ಮಧ್ಯಂತರ ಆದೇಶವನ್ನು ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶಿಸಿದೆ.

ಇಂದು ವಿಚಾರಣೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಮುಡಾ ಪ್ರಕರಣದಲ್ಲಿ 6ನೇ ಪ್ರತಿವಾದಿ ಪಿ ಎಸ್‌ ಪ್ರದೀಪ್‌ ಕುಮಾರ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ವಾದ ಮಂಡಿಸಿದರು. ಟಿ ಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

ಪ್ರದೀಪ್‌ ಕುಮಾರ್‌ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಆರಂಭಿಸುತ್ತಿದ್ದಂತೆ “ಈ ಪ್ರಕರಣದಲ್ಲಿ ಯಾರೂ ಕೂಡಾ ಸಿದ್ದರಾಮಯ್ಯ ಅವರ ಪಾತ್ರವೇನೆಂದು ಹೇಳಿಲ್ಲ. ನೀವಾದರೂ ಈ ಬಗ್ಗೆ ಮಾತನಾಡುತ್ತೀರಾ” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪ್ರಶ್ನಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸ್ವತಂತ್ರ್ಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡವು ತನಿಖೆ ನಡೆಸಬೇಕು. ಅಕೌಂಟೆಂಟ್‌ಗಳು ಕೂಡಾ ಈ ತಂಡದಲ್ಲಿರಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಮಣೀಂದರ್ ಸಿಂಗ್ ಮನವಿ ಮಾಡಿದ್ದಾರೆ.

ಮೂರು ದೂರಿನಲ್ಲಿಯೂ ಒಂದೇ ಅಂಶಗಳಿದ್ದವು. ಆದ್ದರಿಂದ ಒಂದೇ ಶೋಕಾಸ್ ನೋಟಿಸ್ ನೀಡಲಾಗಿದೆ. ಎಲ್ಲಾ ದೂರುಗಳಿಗೂ ಶೋಕಾಸ್ ನೋಟಿಸ್ ನೀಡಬೇಕೇ ಬೇಡವೇ ಎಂಬುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಏಕಾಏಕಿ ನಿರ್ಧಾರ ಕೈಗೊಂಡಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚುವರಿ ದಾಖಲೆ ತರಿಸಿಕೊಂಡು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ” ಎಂದು ಮೆಹ್ತಾ ಹೇಳಿದರು.

“ಸಚಿವರುಗಳನ್ನು ಆಯ್ಕೆ ಮಾಡುವವರು ಸಿಎಂ ಆಗಿದ್ದಾರೆ. ಅವರ ಪರವಾಗಿಯೇ ಸಚಿವರುಗಳು ನಿರ್ಧಾರ ಕೈಗೊಳ್ಳುತ್ತಾರೆ. ಆದ್ದರಿಂದ ಕ್ಯಾಬಿನೆಟ್ ನಿರ್ಧಾರವನ್ನು ಪಾಲಿಸಿಲ್ಲ. ಸ್ವಂತ ವಿವೇಚನೆ ಬಳಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...