ಪದ್ಮಶ್ರೀ ಪುರಸ್ಕೃತ ಕವಿ, ಮಾಜಿ ಎಂಎಲ್‌ಸಿ ದೊಡ್ಡರಂಗೇಗೌಡ ಆರೋಗ್ಯ ಸ್ಥಿತಿ ಗಂಭೀರ

Date:

ಪದ್ಮಶ್ರೀ ಪುರಸ್ಕೃತ ಕವಿ ಮತ್ತು ಮಾಜಿ ಎಂಎಲ್‌ಸಿ ದೊಡ್ಡರಂಗೇಗೌಡ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ಭಾನುವಾರ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಮಾತನಾಡುತ್ತಿಲ್ಲ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಜಿಎಸ್‌ ಆಸ್ಪತ್ರೆಗೆ ‘ಈ ದಿನ.ಕಾಂ‘ ಕರೆ ಮಾಡಿ ವಿಚಾರಿಸಿದಾಗ, “ದೊಡ್ಡರಂಗೇಗೌಡರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ತಜ್ಞ ವೈದ್ಯರೇ ಉತ್ತರಿಸಬೇಕು” ಎಂದಷ್ಟೇ ಆಸ್ಪತ್ರೆ ಸಿಬ್ಬಂದಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿ ದೆಸೆಯಿಂದಲೇ ಕಥೆ, ಕವಿತೆ, ವಿಮರ್ಶೆಗಳನ್ನು ಬರೆಯುತ್ತಾ ಬಂದಿರುವ ದೊಡ್ಡರಂಗೇಗೌಡರು ಸುಮಾರು 56ಕೃತಿಗಳನ್ನು ಪ್ರಕಟಿಸಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಇದುವರೆಗೂ 500ಕ್ಕೂ ಕನ್ನಡ ಚಲನಚಿತ್ರ ಗೀತೆಗಳನ್ನು ಬರೆದು ಖ್ಯಾತಿ ಗಳಿಸಿದ್ದಾರೆ.

1997ರಲ್ಲಿ ‘ಜನುಮದ ಜೋಡಿ’ ಚಿತ್ರಕ್ಕೆ ಬರೆದ ಜಾನಪದೀಯ ಗೀತೆಗೆ ‘ವರ್ಷದ ಶ್ರೇಷ್ಠ’ ಗೀತೆ ಎಂದು ಬೆಳ್ಳಿ ಪದಕದೊಂದಿಗೆ ಪುರಸ್ಕಾರ ದೊರೆತಿದೆ. 2021ರಲ್ಲಿ ನಡೆದ 86ನೇ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಾಲ್ಕು ಬಾರಿ ಉತ್ತಮ ಗೀತರಚನೆಗೆ ರಾಜ್ಯ ಪ್ರಶಸ್ತಿ ದೊಡ್ಡರಂಗೇಗೌಡರಿಗೆ ಒಲಿದಿದೆ.

1972ರಿಂದ 2004ರವರೆಗೂ ಬೆಂಗಳೂರಿನ ಕೃಷ್ಣರಾಜೇಂದ್ರ ಮಾರುಕಟ್ಟೆ ಬಳಿ ಇರುವ ಎಸ್.ಎಲ್.ಎನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. 2008ರಿಂದ 2014ರ ವರೆಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 2018ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...