ಬೆಂಗಳೂರು ದುರಂತ | ನಗರ ಪೊಲೀಸ್‌ ಆಯುಕ್ತ ಸೇರಿ ಹಲವರ ತಲೆದಂಡ

Date:

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಪ್ರಕರಣದ ತನಿಖೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಸಲು ಆದೇಶಿಸಲಾಗಿತ್ತು. ಇದೀಗ, ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, “ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್, ಬೆಂಗಳೂರು ಸೆಂಟ್ರಲ್‌ ಡಿಸಿಪಿ, ಬೆಂಗಳೂರು ಸೆಂಟ್ರಲ್‌ ಎಸಿಪಿ, ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿಯನ್ನು ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...