ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌(92) ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ, ಗುರುವಾರ ಸಂಜೆ ದೆಹಲಿಯ ಏಮ್ಸ್‌(AIIMS) ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನಮೋಹನ್‌...

ಖಜಕಿಸ್ತಾನ | 72 ಪ್ರಯಾಣಿಕರಿದ್ದ ವಿಮಾನ ಪತನ; ಬದುಕುಳಿದ 12 ಮಂದಿ

ಸುಮಾರು 72 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನ ಪತನಗೊಂಡ ಘಟನೆ ಬುಧವಾರ ಖಜಕಿಸ್ತಾನದ ಅಕ್ಟೌ ನಗರದ ಬಳಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನ ಅಗ್ನಿಗಾಹುತಿಯಾಗಿದ್ದು ಒಟ್ಟು12 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ಮಧ್ಯ ಏಷ್ಯಾದ...

ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

ಖ್ಯಾತ ಸಿನಿಮಾ ನಿರ್ದೇಶಕ, ಸಾಕ್ಷ್ಯಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 90 ವರ್ಷದ ಶ್ಯಾಮ್ ಬೆನಗಲ್ ಅವರಿಗೆ ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಪ್ರಕರಣ | ಸಿ ಟಿ ರವಿ ತಕ್ಷಣ ಬಿಡುಗಡೆಗೆ ಹೈಕೋರ್ಟ್‌ ಆದೇಶ

ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಧ್ಯಂತರ ಹೈಕೋರ್ಟ್‌ ಆದೇಶ ನೀಡಿದೆ. ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ನ್ಯಾಯಾಲಯ ಷರತ್ತು ವಿಧಿಸಿದೆ. ಮಹಿಳಾ ಮತ್ತು...

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ: ಸಿ ಟಿ ರವಿ ಬಂಧನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ...

BREAKING NEWS| ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

2020ರ ದೆಹಲಿ ಗಲಭೆಗೆ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಮರ್ ಖಾಲಿದ್ ಅವರಿಗೆ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕುಟುಂಬದ ವಿವಾಹ ಸಮಾರಂಭಕ್ಕೆ ಹಾಜರಾಗಲು 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ....

ಸತ್ಯ ಶೋಧ | ‘ನನಗೆ ಬಾಂಗ್ಲಾ ಹಿಂದುಗಳ ಬಗ್ಗೆ ಕಾಳಜಿ ಇಲ್ಲ’ ಎಂದಿಲ್ಲ ಪ್ರಿಯಾಂಕಾ

ಪ್ರಿಯಾಂಕಾ ಗಾಂಧಿ ಅವರನ್ನು ದೇಶ ದ್ರೋಹಿ ಎಂದು ಬ್ರ್ಯಾಂಡ್ ಮಾಡಲು, ಕೊಳಕರು ತಿರುಚಿದ ಫೋಟೋವನ್ನು, ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಆಗ ರಾಹುಲ್, ಈಗ ಪ್ರಿಯಾಂಕಾ... ಇದರ ಹಿಂದೆ ಇರುವವರಾರು? ಕಳೆದ ಹನ್ನೊಂದು ವರ್ಷಗಳಿಂದ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಈ ಘೋಷಣೆಯನ್ನು ಮಾಡಿದ್ದಾರೆ. ಈ ಮೂಲಕ ಸುಮಾರು 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ...

ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು

ಸ್ಥಗಿತಗೊಂಡಿರುವ ಮಲ್ಲಾಬಾದ ಏತ ನೀರಾವರಿಯ ಕಾಮಗಾರಿ ಟೆಂಡರ್ ಕರೆದು ಕೂಡಲೇ ಕೆಲಸ ಪ್ರಾರಂಭಿಸಲು ಆಗ್ರಹಸಿ ಕಲಬುರಗಿಯ ಜೇವರ್ಗಿಯ ಮಲ್ಲಾಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಜಾನುವಾರು ಬಂಡಿಗಳೊಂದಿಗೆ ರೈತರು ಚಿಗರಳ್ಳಿ...

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ

ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಇಂದು (ಡಿ.16) ಅನಾರೋಗ್ಯದಿಂದ 87 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ...

ಟೆಕ್ಕಿ ಆತ್ಮಹತ್ಯೆ | ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ, ಸಹೋದರನ ಬಂಧನ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ. ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ...

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯ ಪ್ರಯೋಗ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ದೆಹಲಿ ಚಲೋ' ಜಾಥಾ ನಡೆಸಲು ಹೊರಟಿರುವ ರೈತರನ್ನು ಮತ್ತೆ ತಡೆಯಲಾಗಿದೆ. ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 101 ರೈತರುಗಳು ದೆಹಲಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ