ಬೆಂಗಳೂರು ಗ್ರಾಮಾಂತರ

ಬೆಂಗಳೂರು | ದೇವನಹಳ್ಳಿ ನ್ಯಾಯಾಲಯದಲ್ಲಿ ಸೀಲ್ ಕಳ್ಳತನ; ಪ್ರಕರಣ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯದಲ್ಲಿ ಸೀಲ್‌ಗಳ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ನ್ಯಾಯಾಲಯದ Copying Examiner Seal ಹಾಗೂ Round Seal ಸೇರಿದಂತೆ ಎರಡು ಮೊಹರುಗಳನ್ನು ಅಪರಿಚಿತರು ದೋಚಿಕೊಂಡು ಹೋಗಿರುವುದು...

ದೊಡ್ಡಬಳ್ಳಾಪುರ | ಕುಡಿದ ಮತ್ತಿನಲ್ಲಿ ಗಲಾಟೆ; ಮಗನಿಗೆ ಗುಂಡು ಹೊಡೆದ ತಂದೆ

ತಂದೆ ಮತ್ತು ಮಗನ ನಡುವಿನ ವಾಗ್ವಾದ ಅತಿರೇಕಕ್ಕೇರಿದ್ದು, ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗನ ತಲೆಗೆ ಗುಂಡು ಹಾರಿಸಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿಯಲ್ಲಿ ನಡೆದಿದೆ. ಸುರೇಶ್ (49) ಎಂಬಾತ ತನ್ನ ಮಗ ಹರೀಶ್‌ (28)ನೊಂದಿಗೆ...

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಎಡಿಸಿ ಸೈಯಿದಾ ಆಯಿಷಾ.

ದೊಡ್ಡಬಳ್ಳಾಪುರ: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನವೆಂಬರ್ 03 ರಿಂದ 11 ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು...

ದೊಡ್ಡಬಳ್ಳಾಪುರ | ಭಾರೀ ಮಳೆಗೆ ನೆಲಕಚ್ಚಿದ ರಾಗಿ ಬೆಳೆ: 50 ಕೋಟಿಗೂ ಅಧಿಕ ನಷ್ಟ

ದೊಡ್ಡಬಳ್ಳಾಪುರ ತಾಲೂಕು ಮಳೆಯಾಶ್ರಿತ ಪ್ರದೇಶ. ಇಲ್ಲಿನ ರೈತರು ಕಷ್ಟಪಟ್ಟು ಬೆಳೆದ ರಾಗಿ ಬೆಳೆ ಭಾರೀ ಮಳೆಗೆ ನೆಲಕಚ್ಚಿದೆ. ಇದರಿಂದ ರೈತರು ಕಂಗಾಲಾಗಿದ್ದರೆ, ರಾಜ್ಯದಲ್ಲಿ ಈ ಬಾರಿ ರಾಗಿ ಉತ್ಪಾದನೆ ಶೇ.20ರಷ್ಟು ಕಡಿಮೆಯಾಗಬಹುದು ಎಂಬ...

ದೊಡ್ಡಬಳ್ಳಾಪುರ | ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆ!

ಸಾಯುವ ಮುನ್ನ ವಿಡಯೋ ಮಾಡಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋತೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪಾ (28) ಮೃತ ಮಹಿಳೆ. ಸಾಯುವ ಕೆಲ ಹೊತ್ತಿನ ಮೊದಲು...

ಬೆಂ.ಗ್ರಾ | ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಎ ಬಿ ಬಸವರಾಜು

ವಾಯುಮಾಲಿನ್ಯ ತಡೆಗಟ್ಟುವ ಸಲುವಾಗಿ ದೀಪಾವಳಿ ಸಂದರ್ಭದಲ್ಲಿ ಪರಿಸರಸ್ನೇಹಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ...

ದೇವನಹಳ್ಳಿ | ಪೋಕ್ಸೋ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ; ಪಿಎಸ್‌ಐ ಜಗದೇವಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆಯ ಮಹಿಳಾ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ...

ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ

ದೇವನಹಳ್ಳಿ:ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ ಠೇವಣೆ ಇಡುವ ಬದಲು ಸಹಕಾರಿ ಸಂಘದಲ್ಲೇ ಇಟ್ಟು ಹೆಚ್ಚು ಬಡ್ಡಿ ಗಳಿಸುವುದರೊಂದಿಗೆ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಎಂದು ಜಿಲ್ಲಾ ಬ್ಯಾಂಕ್...

ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ...

ಸಾಲಬಾಧೆ: ಗಂಡ-ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆಗೆ ಯತ್ನ

ಸಾಲಬಾಧೆಯಿಂದ ಸಂಕಷ್ಟ, ಒತ್ತಡಕ್ಕೆ ಸಿಲುಕಿ ಮಾನಸಿಕವಾಗಿ ಕುಗ್ಗಿದ್ದ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದೆ. ಕುಟುಂಬದ ಮಹಿಳೆಯು ತನ್ನ ಗಂಡ ಮತ್ತು ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದಿದ್ದಾರೆ. ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ...

ದೊಡ್ಡಬಳ್ಳಾಪುರ | ಪಾರ್ಕ್ ಜಾಗದಲ್ಲಿ ಕೈಗಾರಿಕಾ ತ್ಯಾಜ್ಯ ಹೂತಿದ್ದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಗುತ್ತಿಗೆದಾರನ ದರ್ಪ

ದೊಡ್ಡಬಳ್ಳಾಪುರದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಉದ್ಯಾನ(ಪಾರ್ಕ್‌ ಜಾಗ)ಕ್ಕೆಂದು ಮೀಸಲಿಟ್ಟ ಜಾಗದಲ್ಲಿ ಕೈಗಾರಿಕೆ ತ್ಯಾಜ್ಯವನ್ನು ಹೂತುಹಾಕಲಾಗುತ್ತಿತ್ತು. ಇದನ್ನು ರೆಡ್ ಹ್ಯಾಂಡ್ ಆಗಿ ಪತ್ತೆಹಚ್ಚಿದ ಗ್ರಾಮಸ್ಥರು ಗುತ್ತಿಗೆದಾರನನ್ನು ಪ್ರಶ್ನೆ ಮಾಡಿದರೆ ಆತ ಗ್ರಾಮಸ್ಥರ ಮೇಲೆಯೇ ದರ್ಪ ಮೆರೆದಿದ್ದಾನೆ....

ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಮುರಿದುಬಿದ್ದು ವಿದ್ಯಾರ್ಥಿಗಳಿಗೆ ಗಾಯ: ಸಚಿವ ಮುನಿಯಪ್ಪ ಭೇಟಿ

ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದರ್ಶನ್...

ಈ ಹೊತ್ತಿನ ಪ್ರಮುಖ ಸುದ್ದಿ