ಬೆಂಗಳೂರು ನಗರ

ಬೆಂಗಳೂರು | ಮಹಾರಾಣಿ ಕಾಲೇಜಿನ ಆವರಣದಲ್ಲಿ ಪ್ರೊಫೆಸರ್ ಕಾರು ಅಪಘಾತ; ಮೂವರಿಗೆ ಗಾಯ

ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲೇ ಶನಿವಾರ ಅಪಘಾತ ಸಂಭವಿಸಿದ್ದು ಇಬ್ಬರು ವಿದ್ಯಾರ್ಥಿನಿಯರು ಹಾಗೂ ಕಾರು ಚಲಾಯಿಸುತ್ತಿದ್ದ ಪ್ರೊಫೆಸರ್ ಗಾಯಗೊಂಡಿರುವ ಘಟನೆ ನಡೆದಿದೆ. ಕಾಲೇಜಿನ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್‌(52) ಎಂಬುವವರು ಕಾಲೇಜು ಕ್ಯಾಂಪಸ್​ನೊಳಗಡೆ...

ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ಗಂಡನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ ಪತ್ನಿ ಬೇರೆ ಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರೆ, ಅವರು ಜೀವನಾಂಶ ಕೇಳಲು ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಸೆಕ್ಷನ್ 12ರ ಪ್ರಕಾರ,...

ಯಲಹಂಕ | 10 ಕೋಟಿ ರೂ. ಮೌಲ್ಯದ ಒತ್ತುವರಿ ಜಮೀನು ಸರ್ಕಾರದ ವಶಕ್ಕೆ

ಕಂದಾಯ ಇಲಾಖೆಯಿಂದ ಮುಂದುವರೆದ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನು ಸರ್ಕಾರದ ವಶಕ್ಕೆ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ...

ಕೆಎಸ್‌ಒಯು ಹಗರಣ | ಎಫ್‌ಐಆರ್ ದಾಖಲು; ಸಿಬಿಐ ತನಿಖೆ ಆರಂಭ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ನಲ್ಲಿ ನಡೆದ 300 ಕೋಟಿ ರೂಪಾಯಿಗೂ ಅಧಿಕ ಹಣ ದುರುಪಯೋಗಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆರಂಭಿಸಿದೆ. ಪ್ರಕರಣ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಕೆಎಸ್‌ಒಯುನ...

ಜೆಡಿಎಸ್-ಬಿಜೆಪಿ ಮೈತ್ರಿಗೆ ನನ್ನ ವಿರೋಧವಿದೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇಪ್ಪತ್ತು ವರ್ಷದಿಂದ ಜೆಡಿಎಸ್‌ ಜೊತೆ ನಾನು ಸೆಣಸಾಟ...

ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ 2023ರ ಜುಲೈ 11 ರಿಂದ 2023ರ ಆಗಸ್ಟ್‌ 2ರವರೆಗೆ ನಡೆದ ಸಮೀಕ್ಷೆ 50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...

ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್‌ ಪೊಲೀಸರು...

ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...

ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ? ಮುಖ್ಯಮಂತ್ರಿ ಚಂದ್ರು ಪ್ರಶ್ನೆ

ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...

ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಪುನರಾರಂಭ

ಮಂಗಳವಾರ ರಾತ್ರಿ 'ನಮ್ಮ ಮೆಟ್ರೋ' ಹಸಿರು ಮಾರ್ಗದಲ್ಲಿ ಸಂಚರಿಸಿದ ರೋಡ್‌ ಕಮ್‌ ರೈಲ್ ವಾಹನವು ಆಯತಪ್ಪಿದ್ದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. ಸದ್ಯ ಆರ್.ಆರ್.ವಿ ಅನ್ನು ಕ್ರೇನ್ ಸಹಾಯದಿಂದ...

ಬೆಂಗಳೂರು | ಪೂರ್ವ ವಲಯದಲ್ಲಿ ಅತಿ ಹೆಚ್ಚು ಬೀದಿನಾಯಿಗಳು ವಾಸ

2019ರ ಜನಗಣತಿಯ ನಂತರ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಜನಸಂಖ್ಯೆ 29,645ರಷ್ಟು ಕಡಿಮೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿ ಗಣತಿ ವರದಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಾದ...

ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ