ಭಾಲ್ಕಿ

ಬೀದರ್‌ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಡಿಯಲ್ಲಿ ಬರುವ ಭಾಲ್ಕಿ ತಾಲ್ಲೂಕಿನ ಮೆಹಕರ್‌ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳ ʼಬರʼ ಎದುರಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಿಲು ಮುಚ್ಚಿದೆ. 2006-07ರಲ್ಲಿ ಅಸ್ತಿತ್ವಕ್ಕೆ...

ಬೀದರ್‌ | ಕಾರಂಜಾ ಕಾಲುವೆಯಲ್ಲಿ ಬಿದ್ದು ಬಾಲಕ ಸಾವು

ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ....

ಬೀದರ್ | ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ. ಬೀದರ್ ನಗರದ...

ಬೀದರ್‌ | ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆ ಬೀದರ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಹೊಸದಾಗಿ ಆರಂಭವಾಗಿರುವ ಎರಡು ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್‌ ವಸತಿ...

ಬೀದರ್ ಜಿಲ್ಲೆಯ ಅತಿವೃಷ್ಟಿ ಪರಿಹಾರಕ್ಕೆ ಸಿಎಂ ₹50 ಕೋಟಿ ಅನುದಾನ ನೀಡಿದ್ದಾರೆ : ಸಚಿವ ರಹೀಂ ಖಾನ್

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಪೌರಾಡಳಿ ಸಚಿವ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನಿಟ್ಟೂರು (ಬಿ) ಸಹಯೋಗದಲ್ಲಿ ಮಂಗಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ...

ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು ಆಗಿದೆ. ಅವರು ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಕೊಡುಗೆ ಅನನ್ಯವಾಗಿದೆ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅಂಗವಾಗಿ ಎರಡು ದಿವಸ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು. ಭಾಲ್ಕಿಯ...

ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಲ್ಕಿ ತಾಲೂಕಿನ ಹೋಬಳಿ ಕೇಂದ್ರವಾದ ನಿಟ್ಟೂರ(ಬಿ) ನಾಡ ಕಚೇರಿ ಕಟ್ಟಡ ಶಿಥಿಲಗೊಂಡು ನೀರು ಸೋರುತ್ತಿದ್ದು, ಕಚೇರಿ ಆವಣರದಲ್ಲಿ ಅಪಾರ ಪ್ರಮಾಣದಲ್ಲಿ...

ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...

ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು. ಬೀದರ್‌ ಜಿಲ್ಲಾ ಪಂಚಾಯತ್‌, ಭಾಲ್ಕಿ ತಾಲೂಕು...

ಈ ಹೊತ್ತಿನ ಪ್ರಮುಖ ಸುದ್ದಿ