ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಅಮಿತ್ ಶಾ ಹೇಳಿಕೆ ಖಂಡಿಸಿ ಜ.23ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ, ʼಅಂಬೇಡ್ಕರ್ ಹೆಸರು ವ್ಯಸನವಾಗಿದೆ. ಅದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತುʼ ಎಂಬ ಹೇಳಿಕೆಯನ್ನು ಖಂಡಿಸಿ ಜನವರಿ 23ರಂದು ಬೆಂಗಳೂರು ಚಲೋ...

ಚಿಂತಾಮಣಿ | ನಕಲಿ ಸಹಿ ಬಳಸಿ ಹಣ ವರ್ಗಾವಣೆ; ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು

ನಿಲಯಪಾಲಕರ ನಕಲಿ ಸಹಿ ಬಳಸಿಕೊಂಡು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವ ದೂರಿನ ಆಧಾರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಚಿಂತಾಮಣಿ ತಾಲೂಕಿನ ಗಡಿಗವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಯೋಜಿತ...

ಚಿಕ್ಕಬಳ್ಳಾಪುರ | ವಿಟಿಯು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...

ಚಿಕ್ಕಬಳ್ಳಾಪುರ | ದಲಿತರ ಭೂಮಿ, ವಸತಿ ಮತ್ತು ಮೂಲಭೂತ ಸೌಲಭ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆ

ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳು ಪರಿಹಾರ ಕಾಣದೆ ಕಡತಗಳಲ್ಲೇ ಕುಳಿತಿವೆ. ಈಗಲಾದರೂ ಶಾಶ್ವತ ಪರಿಹಾರ ನೀಡಿ ಎಂದು ಆಗ್ರಹಿಸಿ ದಸಂಸ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಭವನದಿಂದ...

ಚಿಂತಾಮಣಿ | ಹಾಲಿಗೆ ನೀರು ಬೆರಕೆ; ಸಿಬ್ಬಂದಿ ಅಮಾನತು

ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ಸಿಬ್ಬಂದಿಯೋರ್ವ ನೀರನ್ನು ಕಲಬೆರಕೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ನೀರು...

ಚಿಕ್ಕಬಳ್ಳಾಪುರ | ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಜಿಲ್ಲಾಸ್ಪತ್ರೆ

ಸ್ಥಳೀಯ ಆಡಳಿತ ಸಂಸ್ಥೆಗಳು ಗ್ರಂಥಾಲಯ ಕರ ಬಾಕಿ ಉಳಿಸಿಕೊಳ್ಳುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಕಾರಿ ಇಲಾಖೆಗಳು ಅನುದಾನ ಇದ್ದರೂ ಕೋಟ್ಯಾಂತರ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಳ್ಳುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯು ಒಂದು ಕೋಟಿಗೂ ಅಧಿಕ...

ಗೌರಿಬಿದನೂರು | ದಲಿತ ವ್ಯಕ್ತಿಗೆ ದೇವಾಲಯ ಪ್ರವೇಶ ನಿರಾಕರಣೆ

ದಲಿತ ವ್ಯಕ್ತಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೆಭಾವಿ ಹೋಬಳಿಯ ಬೆಳ್ಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ವೈಕುಂಠ ಏಕಾದಶಿ ಹಿನ್ನೆಲೆ ಗ್ರಾಮದ ವೆಂಕಟೇಶ್ವರ ಸ್ವಾಮಿ...

ಚಿಕ್ಕಬಳ್ಳಾಪುರ | ಅರ್ಧ ಎಕರೆ ಸೇವಂತಿಗೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು; ರೈತ ಕಂಗಾಲು

ಸುಮಾರು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸೇವಂತಿಗೆ ಗಿಡಗಳಿಗೆ ರಾತ್ರೋರಾತ್ರಿ ದುಷ್ಕರ್ಮಿಗಳು ಕಳೆನಾಶಕ ಸಿಂಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಸತೀಶ್‌ ಬಾಬು ಬಿನ್ ವೆಂಕಟೇಶಪ್ಪ...

ಚಿಕ್ಕಬಳ್ಳಾಪುರ | ಭಾರತೀಯ ಮೂಲ ಕಲೆಯ ಪೋಷಣೆ ಶ್ಲಾಘನೀಯ:‌ ಹೈಕೋರ್ಟ್ ವಕೀಲ ಪಾವಗಡ ಶ್ರೀರಾಮ್

‌ಭಾರತೀಯ ಮೂಲ ಕಲೆಗಳು ಅಳಿವಿನಂಚಿಗೆ ಸರಿಯುತ್ತಿರುವ ಇಂದಿನ ಡಿಜಿಟಲ್‌ ಯುಗದಲ್ಲಿ ಜನಪದ ಕಲೆಗಳ ಪೋಷಣೆ ನಿಜಕ್ಕೂ ಶ್ಲಾಘನೀಯ ಎಂದು ಹೈಕೋರ್ಟ್‌ ವಕೀಲ ಪಾವಗಡ ಶ್ರೀರಾಮ್‌ ಹೇಳಿದರು. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್‌...

ಚಿಂತಾಮಣಿ | ಬೈಕ್‌ ಕಳ್ಳನ ಬಂಧನ; 12 ದ್ವಿಚಕ್ರ ವಾಹನಗಳು ವಶ

ಖತರ್ನಾಕ್‌ ಬೈಕ್ ಕಳ್ಳನನ್ನು ಬಂಧಿಸಿರುವ‌ ಚಿಂತಾಮಣಿ ನಗರ ಠಾಣೆ ಪೊಲೀಸರು, ಆರೋಪಿಯಿಂದ 12 ಲಕ್ಷ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಬಂಗಾರಪ್ಪ ಬಿನ್ ಸತ್ಯಪ್ಪ(28) ಕಳ್ಳತನ...

ಬಾಗೇಪಲ್ಲಿ | ಲಂಚ; ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಶುಕ್ರವಾರ ಬಲೆಗೆ ಬಿದ್ದಿದ್ದಾರೆ. ಬಾಗೇಪಲ್ಲಿ ಪುರಸಭೆ ಕಂದಾಯ ಅಧಿಕಾರಿ ಅರುಣ್ ಕುಮಾರ್ ಲೋಕಾಯುಕ್ತ ಟ್ರ್ಯಾಪ್‌ಗೆ ಒಳಗಾದ ಅಧಿಕಾರಿ. ವ್ಯಕ್ತಿಯೊಬ್ಬರ ವಿಭಾಗವಾರು ಇ-ಖಾತೆ ಮಾಡಿಕೊಡಲು...

ಚಿಂತಾಮಣಿ | ಓಮ್ನಿ ಕಾರು ಮರಕ್ಕೆ ಡಿಕ್ಕಿ; ನಾಲ್ವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಕೋಲಾರಕ್ಕೆ ಹೋಗುವ ಕಾಚಹಳ್ಳಿ ಗೇಟ್ ಬಳಿ ಬುಧವಾರ ಬೆಳಗಿನ ಜಾವ...

ಈ ಹೊತ್ತಿನ ಪ್ರಮುಖ ಸುದ್ದಿ